ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ರಸ್ತೆ ಸಮಗ್ರ ಅಭಿವೃದ್ಧಿಗೆ ದೊರೆತ ಅನುಮೋದನೆ

Rashmi Kasaragodu
Updated On : 2 Dec 2013, 11:34 am

ಕುಣಿಗಲ್: ತಾಲೂಕಿನ ಗಡಿ ಗ್ರಾಮಗಳಿಂದ ರಾಜ್ಯ ಹೆದ್ದಾರಿ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ಸಂಪರ್ಕ ಕಲ್ಪಿಸುವ ಸಂಪರ್ಕ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಮೊದಲ ಹಂತದಲ್ಲಿ ಈಗಾಗಲೆ 32 ಕೋಟಿ ರು.ವೆಚ್ಚದಲ್ಲಿ 24 ಕಿಮಿ ಉದ್ದದ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಂಡು ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಶಾಸಕ ಡಿ.ನಾಗರಾಜಯ್ಯ ತಿಳಿಸಿದರು. ತಾಲೂಕಿನ ಹುತ್ರಿದುರ್ಗ ಹೋಬಳಿಯ ಹಂದಲಗೆರೆ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವಿಶೇಷ ಅಭಿವೃದ್ಧಿ ಯೋಜನೆಯ ಅನುದಾನದಡಿಯಲ್ಲಿ 79 ಲಕ್ಷ ರು.ವೆಚ್ಚದಲ್ಲಿ ಸಂಪರ್ಕರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಈ ರಸ್ತೆಯ ಅಭಿವೃದ್ಧಿಯಿಂದಾಗಿ ಮಾಗಡಿ, ಚನ್ನಪಟ್ಟಣ, ಮದ್ದೂರು, ರಾಮನಗರ ತಾಲೂಕಿನ ರಸ್ತೆ ಸಂಪರ್ಕ ಉತ್ತಮಗೊಂಡು ಜನತೆಗೆ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಉಜ್ಜಿನಿ ಸೇರಿದಂತೆ ತಾವರೆಕೆರೆ, ಚೌಡನಕುಪ್ಪೆ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಮೂಲಕ  ತಾಲೂಕಿನ ಗಡಿಭಾಗದ ಗ್ರಾಮಗಳು ಅಭಿವೃದ್ಧಿಗೊಳ್ಳಲು ಸಹಕಾರಿಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದೆಂದರು. ಜಿಪಂ ಸದಸ್ಯ ವೈ.ಎಚ್. ಹುಚ್ಚಯ್ಯ, ತಾಲೂಕಿನಲ್ಲಿ 16ಕಿಮಿ ರಾಷ್ಟ್ರೀಯ ಹೆದ್ದಾರಿ, 126ಕಿಮಿ ರಾಜ್ಯ ಹೆದ್ದಾರಿ ಹಾಗೂ 426 ಕಿಮಿ ಲೋಕೋಪಯೋಗಿ ಇಲಾಖೆ ರಸ್ತೆಗಳಿದ್ದು, ಇವುಗಳ ಪೈಕಿ ಬಹುತೇಕ ಮೇಲ್ದರ್ಜೆಗೇರಿಸುವುದು ಸೇರಿದಂತೆ ಅಭಿವೃದ್ಧಿ ಕಾಮಗಾರಿಗೆ ಸಾಕಷ್ಟು ಅನುದಾನದ ಕೊರತೆ ಇರುವ ಕಾರಣ ರಸ್ತೆಗಳ ಅಭಿವೃದ್ಧಿ ಕಾರ್ಯವಿಳಂಬವಾಗುತ್ತಿದ್ದು, ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಿ ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವುದು ಸ್ವಾಗತಾರ್ಹ ಎಂದರು. ಜಿಪಂ ಸದಸ್ಯೆ ಡಾ.ಬಿ.ಎನ್. ರವಿ, ತಾವರೆಕೆರೆ ಗ್ರಾಪಂ ಅಧ್ಯಕ್ಷ ಕೆ.ಕುಮಾರ್, ತಹಸೀಲ್ದಾರ್ ಪುಟ್ಟನರಸಯ್ಯ, ಲೋಕೋಪಯೋಗಿ ಇಲಾಖೆ ಎಇಇ ಲಕ್ಷ್ಮೀಪ್ರಸನ್ನ, ಜೆಇ ಬೋರೇಗೌಡ, ಜಿಪಂ ಎಇಇ ಸಣ್ಣಮರಿಗೌಡ, ಮುಖಂಡ ಕೆ.ರಮೇಶ, ಸಿದ್ದಲಿಂಗಪ್ಪ ಸೇರಿದಂತೆ ಇಕರರು ಉಪಸ್ತಿತರಿದ್ದರು.
ಇಂದು ವಿಶ್ವ ಅಂಗವಿಕಲ ದಿನಾಚರಣೆ
ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಮಂಗಳವಾರ ಬೆಳಿಗ್ಗೆ 10ಗಂಟೆಗೆ ಸರ್ವ ಶಿಕ್ಷಣ ಅಭಿಯಾನದ ವತಿಯಿಂದ ವಿಶ್ವ ಅಂಗವಿಲಕರ ದಿನಾಚರಣೆ ಮತ್ತು 6-14 ವಯೋವಾನದ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಕ್ರೀಡಾ ಮತ್ತು ಸಾಂಸ್ಕೃತಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement