ಖಾಸಗಿ ಶಾಲೆಗಳಲ್ಲಿ ಆರ್ ಟಿ ಇ. ಪ್ರವೇಶಕ್ಕೆ ಅರ್ಜಿ
ತುರುವೇಕರೆ: ತಾಲೂಕಿನ 2014-15 ನೇ ಸಾಲಿಗೆ ಖಾಸಗಿ ಶಾಲೆಗಳಲ್ಲಿ ಆರ್.ಟಿ.ಇ ಯೋಜನೆ ಅಡಿ ಮಕ್ಕಳ ದಾಖಲೆ ಪ್ರಕ್ರಿಯೆ ಪ್ರಾರಂಭವಾಗಿದೆ. ಪೋಷಕರು ಅರ್ಹ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. 2014-15 ನೇ ಸಾಲಿಗೆ ಮಕ್ಕಳ ಶಿಕ್ಷಣ ಹಕ್ಕು ಕಾಯಿದೆ 2009 ರ ಅಡಿಯಲ್ಲಿ ತಾಲೂಕಿನ ಎಲ್ಲಾ ಮಾನ್ಯತೆ ಪಡೆದ ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಶೇಕಡಾ 25 ರಷ್ಟು ಕೋಟಾದಡಿ ಆರ್ಥಿಕವಾಗಿ ಹಿಂದುಳಿದಿರುವ, ಪರಿಶಿಷ್ಟ ಜಾತಿ, ಪಂಗಡದ ಮಕ್ಕಳಿಗೆ ಮೀಸಲಿರಿಸಿರುವ ಸೀಟುಗಳಿಗೆ ಉಚಿತವಾಗಿ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಪೋಷಕರು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ಜ.7 ರಿಂದ ಫೆ.8ರವರೆಗೆ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.