ಅರ್ಜಿ ಆಹ್ವಾನ
ತುಮಕೂರು: ಸಮಾಜ ಕಲ್ಯಾಣ ಇಲಾಖಾ ವತಿಯಿಮದ 2013-14ನೇ ಸಾಲಿಗೆ ಜಿ.ಪಂ. ಶ್ರೇಷ್ಠತೆ ಪಡೆದ ವಿದ್ಯಾರ್ಥಿಗಳಿಗೆ ಸಹಾಯ ಕಾರ್ಯಕ್ರಮದಲ್ಲಿ ಪ.ಜಾತಿಯ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರಿಗೆ ಲಘು ವಾಹನ ಚಾಲನಾ ತರಬೇತಿಯನ್ನು ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು 18 ರಿಂದ 35 ವರ್ಷ ವಯೋವುತಿಯೊಳಗಿರಬೇಕು, ತರಬೇತಿಯ ಅವಧಿ 1 ತಿಂಗಳು, ಈ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಶಿಷ್ಯವೇತನ ಪಾವತಿಸಲಾಗುವುದು, ಅಭ್ಯರ್ಥಿಯು ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿದ್ದು, ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಈ ಹಿಂದೆ ಯಾವುದೇ ತರಬೇತಿಯನ್ನು ಪಡೆದಿರಬಾರದು. ಆಯ್ಕೆಯಾದ ಅಭ್ಯರ್ಥಿಗಳು ತರಬೇತಿಯನ್ನು ಮಧ್ಯದಲ್ಲಿ ಬಿಟ್ಟು ಹೋಗಬಾರದು ಹಾಗೂ ಈ ಬಗ್ಗೆ 20 ರು. ಛಾಪಾ ಕಾಗದದಲ್ಲಿ ಮುಚ್ಚಳಿಕೆ ಪತ್ರ ಬರೆದು ಕೊಡಬೇಕಾಗಿದೆ. ಇಚ್ಛೆಯುಳ್ಳವರು ಅರ್ಜಿ ನಮೂನೆಯನ್ನು ಉಚಿತವಾಗಿ ಕುಣಿಗಲ್ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 20 ರ ಸಂಜೆ 5.30 ರೊಳಗಾಗಿ ಸಲ್ಲಿಸಬಹುದಾಗಿದೆ.
ಮುಖ್ಯ ಶಿಕ್ಷಕರ ಸಭೆ
2014-15ನೇ ಸಾಲಿನ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದ್ದು, ವಿಚಾರದಲ್ಲಿ ಚರ್ಚಿಸಲು ಡಿ.11 ರಂದು ಮಧ್ಯಾಹ್ನ 3 ಗಂಟೆಗೆ ವಿದ್ಯಾನಿಕೇತನ ಶಾಲೆಯಲ್ಲಿ ಏರ್ಪಡಿಸಿರುವ ಸಭೆಗೆ ತಾಲೂಕಿನ ಎಲ್ಲಾ ಖಾಸಗಿ ಅನುದಾನರಹಿತ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು ಹಾಜರಾಗಲು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಕುಮುದಮ್ಮ ತಿಳಿಸಿದ್ದಾರೆ.