ಇಂದು ಗಣೇಶ ಮೂರ್ತಿ ವಿಸರ್ಜನೆ
ಕುಣಿಗಲ್: ಪಟ್ಟಣದ ಪುರಾತನ ಗಣೇಶ ಪ್ರತಿಷ್ಠಾಪನಾ ಸಮಿತಿಯಾದ ದೊಡ್ಡಪೇಟೆಯ ಮುನ್ಸಿಪಲ್ ಛಾವಡಿ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವನ್ನು ಇದೇ 8ರ ಭಾನುವಾರದಂದು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಪ್ರಕಟಣೆ ತಿಳಿಸಿದ್ದು, ಭಾನುವಾರ ಬೆಳಗ್ಗೆ ಧಾರ್ಮಿಕ ಪೂಜೆ, ಹೋಮ, ಅಭಿಷೇಕದ ನಂತರ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಿದ್ದು, ಮಧ್ಯಾಹ್ನ ಆಕರ್ಷಕ ಜನಪದ ಕಲಾತಂಡಗಳು, ಮಂಗಳ ವಾದ್ಯದ ಮೇಳಗಳೊಂದಿಗೆ ಶ್ರೀಸ್ವಾಮಿಯ ಮುತ್ತಿನ ಪಲ್ಲಕ್ಕಿಯಲ್ಲಿ ವಿರಾಜಿಸಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬೇಗೂರು ಕೆರೆಯಲ್ಲಿ ಆಕರ್ಷಕ ಸಿಡಿಮದ್ದಿನ ಬಾಣ ಬಿರುಸು, ಮದ್ದಿನ ಮರ ಪ್ರದರ್ಶನದ ನಂತರ ವಿಸರ್ಜನಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ
ತುಮಕೂರು: ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಿಸೆಂಬರ್ 11 ರಂದು ಬೆ. 9 ರಿಂದ ಮ.12.30 ಗಂಟೆಯವರೆಗೆ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ ಎಂದು ಕುಣಿಗಲ್ ತಾಲೂಕು ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.