ಇಂದು ಮಾನವ ಹಕ್ಕುಗಳ ದಿನಾಚರಣೆ
ತುಮಕೂರು: ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ, ದೆಹಲಿ ವತಿಯಿಂದ ತುಮಕೂರಿನ ಜಿಲ್ಲಾ ನಿವೃತ್ತ ನೌಕರರರ ಸಂಘದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಡಿ.10 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಸಂಸದ ಜಿ.ಎಸ್. ಬಸವರಾಜು ಸಮಾರಂಭ ಉದ್ಘಾಟಿಸಲಿದ್ದಾರೆ. ತುಮಕೂರು ನಗರ ಶಾಸಕ ಡಾ.ರಫೀಕ್ ಅಹಮದ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ಗೌಡ, ವಿಧಾನಪರಿಷತ್ ಸದಸ್ಯ ಡಾ.ಎಂ.ಆರ್. ಹುಲಿನಾಯ್ಕರ್, ಜಿಪಂ ಅಧ್ಯಕ್ಷೆ ಸಾಕಮ್ಮ ನಟರಾಜ್, ನಗರಸಭಾಧ್ಯಕ್ಷೆ ಗೀತಾ ರುದ್ರೇಶ್ ಪಾಲ್ಗೊಳ್ಳಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ಆರ್. ಬೋಬಡೆ, ಸಮಾಜ ಸೇವಕಿ ಸಾಕಮ್ಮ ಅವರನ್ನು ಸನ್ಮಾನಿಸಲಾಗುವುದು. ಅಧ್ಯಕ್ಷತೆಯನ್ನು ಜಿಲ್ಲಾ ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ಅಧ್ಯಕ್ಷ ಆರ್. ಲೋಕೇಶ್ ವಹಿಸಲಿದ್ದಾರೆ. ತುಮಕೂರಿನ ಚಿಕ್ಕಪೇಟೆಯ ಹಿರೇಮಠಾಧ್ಯಕ್ಷ ಡಾ. ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.