ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸ್ವಯಂ ಉದ್ಯೋಗ ಪ್ರಾರಂಭಿಸಿ: ಯುವಕರಿಗೆ ಶಾಸಕರ ಕರೆ

Vishwanath S
Updated On : 11 Dec 2013, 1:00 am

ಶಿರಾ: ಯುವಕರು ಕೈಗಾರಿಕೆ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಸ್ವಯಂ ಉದ್ಯೋಗ ಪ್ರಾರಂಭಿಸಿ ತಮ್ಮ ಜೀವನವನ್ನು ಉತ್ತಮಪಡಿಸಿಕೊಳ್ಳಬೇಕು ಎಂದು ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು.
ಅವರು ನಗರದ ಶ್ರೀ ಲಕ್ಷ್ಮೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ತುಮಕೂರು ವತಿಯಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ಉದ್ಯಮಶೀಲತಾ ಜಾಗೃತಿ ಶಿಬಿರ ಹಾಗೂ ಕೈಗಾರಿಕಾ ವಿಚಾರ ಸಂಕಿರಣ ಮತ್ತು 2009-14 ರ ಕೈಗಾರಿಕಾ ನೀತಿಯ ಅರಿವು ಮೂಡಿಸುವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು.
ಉದ್ಯಮಾ ಶೀಲತಾ ತರಬೇತಿಗಳು ನಿರುದ್ಯೋಗಿಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದು ಇದನ್ನು ಸದುಪಯೋಪಡಿಸಿಕೊಳ್ಳಿ ಎಂದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಜಿ.ಪಂ. ಸದಸ್ಯ ಸಿ.ಆರ್.ಉಮೇಶ್ ಅವರು ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಪ್ರಾರಂಭಿಸಲು ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದಿಂದ ಉತ್ತಮ ಮಾಹಿತಿಯನ್ನು ನೀಡುತ್ತಿದ್ದು ಇದರಿಂದ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಸಹಾಯಕವಾಗುತ್ತದೆ ಎಂದರು.
ಜಿ.ಪಂ. ಅಧ್ಯಕ್ಷೆ ಸಾಕಮ್ಮ ನಾಗರಾಜು, ತಾ.ಪಂ. ಅಧ್ಯಕ್ಷೆ ಗಂಗಮ್ಮ ಸಿದ್ದಹನುಮಯ್ಯ, ಉಪಾಧ್ಯಕ್ಷ ಸಿ.ಎಸ್. ಉದಯಶಂಕರ್ ಮಾತನಾಡಿದರು.  ಜಿ.ಪಂ. ಮಾಜಿ ಉಪಾದ್ಯಕ್ಷೆ ಲಲಿತಮ್ಮ ಮಂಜುನಾಥ್, ಜಿ.ಪಂ. ಸದಸ್ಯರಾದ ಬಿ.ಕೆ.ಬಡೀರಣ್ಣ, ಅರೇಹಳ್ಳಿ ರಮೇಶ್, ಪುಟ್ಟಮಣಿ ಬೊಮ್ಮಣ್ಣ, ಕೆ.ಎಸ್.ಎಫ್.ಸಿ. ಸಹಾಯಕ ಪ್ರಧಾನ ವ್ಯವಸ್ಥಾಪಕ ಉದಯಶಂಕರ್, ಕೆ.ಎಸ್.ಎಸ್.ಐ.ಡಿ.ಸಿ. ಪ್ರಧಾನ ವ್ಯವಸ್ಥಾಪಕ ಸಿ.ಟಿ. ಮೂಡಲಗಿರಯ್ಯ, ಎಸ್.ಬಿ.ಎಂ. ವ್ಯವಸ್ಥಾಪಕ ಭಾಸ್ಕರ್, ಶಿರಾ ಕೈಗಾರಿಕಾ ವಿಸ್ತರಣಾಧಿಕಾರಿ ಜಿ.ಕೆ.ಉಮಾಶಂಕರ್, ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement