ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಹೆಣ್ಣಿಗೆ ಗಂಡ, ಮಕ್ಕಳನ್ನು ಬದಲಾವಣೆ ಮಾಡುವ ಶಕ್ತಿಯಿದೆ: ಸಿಇಓ

Srinivasa Murthy VN
Updated On : 12 Dec 2013, 1:22 am

ಕನ್ನಡಪ್ರಭ ವಾರ್ತೆ, ತುಮಕೂರು, ಡಿ.11
ಹೆಣ್ಣಿಗೆ ಇರುವ ಶಕ್ತಿಯಿಂದ ಗಂಡ ಮತ್ತು ಮಕ್ಕಳನ್ನು ಬದಲಾವಣೆ ಮಾಡಿ, ಸಮಾಜದ ಮುಖ್ಯವಾಹಿನಿಗೆ
ತರುವ ಕೆಲಸವನ್ನು ಮಹಿಳೆ ಮಾಡಬಹುದು ಎಂದು ಜಿಲ್ಲಾ ಪಂಚಾಯತ್ ಸಿಇಓ ಗೋವಿಂದರಾಜು ಅಭಿಪ್ರಾಯಪಟ್ಟರು. ನಗರದಲ್ಲಿರುವ ಹಳೆ ಡಯಟ್‌ನ ಆವರಣದಲ್ಲಿ ಅಸೆಡಾ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಶತಕೋಟಿ ಮಹಿಳೆಯರು ಎಚ್ಚೆತ್ತುಕೊಳ್ಳುತ್ತಿದ್ದಾರೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಹೆಣ್ಣು ಬ್ರೂಣ ಹತ್ಯೆ ಹಾಗೂ ಬಾಲ್ಯ ವಿವಾಹ ವಿರೋಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದಿನ ಕಾಲದಲ್ಲಿ ಮಹಿಳೆಯರು ಮನೆಯಿಮದ ಹೊರಗಡೆ ಬರಲು ಹೆದರುತ್ತಿದ್ದರು. ಆದರೆ ಇಂದು ಮಹಿಳೆಯರಿಗೆ ಶೇ.50ರಷ್ಟು ರಿಯಾಯಿತಿ ಕೊಟ್ಟಿರುವುದರಿಂದ ಪುರುಷರಿಗಿಂತ ಕಡಿಮೆ ಇಲ್ಲ ಎಂಬುದನ್ನು ತೋರಿಸುತ್ತಿದ್ದಾರೆ ಎಂದು ತಿಳಿಸಿದರು. ಪ್ರಸ್ತುತ ಸಮಾಜದಲ್ಲಿ ಹೆಣ್ಣಿಗೆ ಬಹಳ ಪವಿತ್ರವಾದ ಸ್ಥಾನಮಾನಗಳನ್ನು ಕೊಟ್ಟಿದ್ದಾರೆ. ರಾಜಕೀಯ ಕ್ಷೇತ್ರದಿಂದ ಹಿಡಿದು ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿಯೂ ಮಹಿಳೆಯರು ಏನೆಂಬುದನ್ನು ತೋರಿಸುತ್ತಿದ್ದಾರೆ ಎಂದು ಗೋವಿಂದರಾಜು ತಿಳಿಸಿದರು.
ಅಸೆಡಾ ಸಂಸ್ಥೆಯ ಅಧ್ಯಕ್ಷೆ ಯಶೋಧ ಮಾತನಾಡಿ, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಲವಾರು ಜಾಥಾ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಮೂಢ ನಂಬಿಕೆ ಹಾಗೂ ಮೌಢ್ಯಗಳನ್ನು ಮಟ್ಟಹಾಕಲು ಇಂತಹ ವೇದಿಕೆಗಳು ಸಹಕಾರಿಯಾಗಬೇಕೆಂದು ತಿಳಿಸಿದರು.
ಕಾತ್ಯಾಯಿನಿ, ಚೌಡಮ್ಮ, ರೋಜಮ್ಮ, ನಿರ್ಮಲಾ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಅಸೆಡಾ ಕಾರ್ಯಕರ್ತರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement