ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸುಪ್ತ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಸಹಕಾರಿ

Vishwanath S
Updated On : 17 Dec 2013, 12:30 pm

ಗುಬ್ಬಿ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಪ್ರತಿಭಾ ಕಾರಂಜಿಯತಂಹ ಸಾಂಸ್ಕೃತಿಕ ಸ್ಪರ್ಧೆಗಳು ಹೆಚ್ಚು ಸಹಕಾರಿಯಾಗಲಿವೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ಪ್ರಿಯ ಆಂಗ್ಲಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯ ಜೊತೆಗೆ ಗ್ರಾಮೀಣ ಕಲೆ ಮತ್ತು ಸಂಸ್ಕತಿಯ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದು ಮಕ್ಕಳಲ್ಲಿರುವ ಸಾಂಸ್ಕೃತಿಕ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವಂತಹ ಕೆಲಸ ಪ್ರತಿಭಾ ಕಾರಂಜಿಗಳ ಮೂಲಕ ಸಾಧ್ಯವಾಗಲಿದೆ ಎಂದರು. ಇಂದಿನ ಆಧುನಿಕ ಯುಗದಲ್ಲಿ ಮರೆಯಾಗುತ್ತಿರುವ ನಮ್ಮ ಗ್ರಾಮೀಣ ಕಲೆ ಮತ್ತು ಸಂಸ್ಕೃತಿಯನ್ನು ಗ್ರಾಮೀಣ ವಿದ್ಯಾರ್ಥಿಗಳು ಉಳಿಸಿ ಬೆಳೆಸುವತ್ತ ಮುಂದಾಗುತ್ತಿರುವುದು ಅಭಿನಂದನಾರ್ಹವಾದುದೆಂದ ಅವರು ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಕಲಿಸಿಕೊಡುವತ್ತ ಶಿಕ್ಷಕ ಸಮುದಾಯ ಚಿಂತನೆ ನಡೆಸಬೇಕೆಂದರು.
ಉಳಿಸಿ ಬೆಳೆಸಿ: ಜಿಪಂ ಸದಸ್ಯ ಪಿ.ಬಿ.ಚಂದ್ರಶೇಖರಬಾಬು ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಬಿ. ಬಸವರಾಜು ಮಾತನಾಡಿ ಈಗಾಗಲೇ ತಾಲೂಕಿನ ಸುಮಾರು 453 ಶಾಲೆಗಳಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ನಡೆಸಲಾಗಿದ್ದು ಸ್ಪರ್ಧೆಗಳಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆಂದರು. ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತಾಲ್ಲೂಕಿನ 453 ಶಾಲೆಗಳಿಂದ ಸುಮಾರು 3500 ಕ್ಕೂ ಹೆಚ್ಚು ವಿದ್ಯಾರ್ಥಿಗಳು  ಭಾಗವಹಿಸಿ ವಿವಿಧ ವೇಷಭೂಷಣ ತೊಟ್ಟು ಹಲವಾರು ಮಹತ್ವ ಪೂರ್ಣವಾದ ಕಲಾ ಪ್ರತಿಭೆಗಳನ್ನು ಅನಾವರಣ ಗೊಳಿಸಿದರು.  ಜಿಪಂ ಸದಸ್ಯ ಪಿ.ಬಿ.ಚಂದ್ರಶೇಖರಬಾಬು,  ಗೌರಮ್ಮ, ತಾಲೂಕು ಪಂಚಾಯ್ತಿ ಅಧ್ಯಕ್ಷ ಕೆ.ಎನ್. ಬಾಲಕೃಷ್ಣ, ಪಟ್ಟಣ ಪಂಚಾಯತಿ ಅಧ್ಯಕ್ಷ ಜಿ.ಡಿ. ಸುರೇಶ್‌ಗೌಡ, ಕ್ಷೇತ್ರ ಸಮನ್ವಯಾಧಿಕಾರಿ ನರೇಂದ್ರ ಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸೋಮಶೇಖರ್, ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕರಿಯಪ್ಪ, ತಾ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗೊರವಯ್ಯ, ಕಾರ್ಯದರ್ಶಿ ಎನ್.ಟಿ. ಪ್ರಕಾಶ್ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement