ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ವಿಭಾಗ ಮಟ್ಟದ ಯುವಜನ ಮೇಳ

Srinivasa Murthy VN
Updated On : 20 Dec 2013, 12:59 pm

ಹಾಸನ: ಕಳೆದ ಸಾಲಿನ ಮೈಸೂರು ವಿಭಾಗ ಮಟ್ಟದ ಯುವಜನ ಮೇಳವನ್ನು, ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ರಂಗಮಂದಿರದಲ್ಲಿ ಡಿ. 21ರಿಂದ ಡಿ. 23 ರವರೆಗೆ ನಡೆಸಲಾಗುತ್ತಿದ್ದು, ಈ ಯುವಜನ ಮೇಳದಲ್ಲಿ ಕಳೆದ ಫೆ. 15ರಂದು  ನಡೆದ ಹಾಸನ ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಮತ್ತು ತಂಡ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಯುವಕ ಯುವತಿಯರು ಭಾಗವಹಿಸಲು ಅರ್ಹರಾಗಿದ್ದಾರೆ.  ಸ್ಪರ್ಧಿಗಳು ಡಿ. 21ರಂದು ಬೆಳಗ್ಗೆ 9ರೊಳಗಾಗಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ರಂಗಮಂದಿರದಲ್ಲಿ ತಂಡದ ವ್ಯವಸ್ಥಾಪಕರಿಗೆ ವರದಿ ಮಾಡಲು ಸೂಚಿಸಿದೆ. ಸ್ಪರ್ಧೆಗಳು ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ. ಸ್ಪರ್ಧಿಗಳಿಗೆ ಪ್ರಯಾಣ ಭತ್ಯೆಯನ್ನು ಫೆ. 23ರಂದು ನಂಜನಗೂಡಿನಲ್ಲಿ ವಿತರಿಸಲಾಗುವುದು.   ಹೆಚ್ಚಿನ ವಿವರಗಳಿಗೆ ದೂರವಾಣಿ 08172-246056 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  ಸಹಾಯಕ ನಿರ್ದೇಶಕ ಶಿವಾನಂದ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement