ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ: ಕುಸ್ತಿಪಟುಗೆ ಅಭಿನಂದನೆ

Vishwanath S
Updated On : 21 Dec 2013, 1:29 am

ಮಧುಗಿರಿ: ಪಟ್ಟಣದ ಗೌತಮಬುದ್ಧ ಪಪೂ ಕಾಲೇಜಿನಲ್ಲಿ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿ ಬಿ.ಎಸ್.ಲಕ್ಷ್ಮೀಕಾಂತ 50 ಕೆಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಉತ್ತಮ ಸಾಧನೆ ಮಾಡುಲುದ ಮೂಲಕ ಮಧುಗಿರಿಯ ಕೀರ್ತಿಯನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ದ  ಕೀರ್ತಿಗೆ ಭಾಜನನಾಗಿದ್ದಾನೆ ಎಂದು ಪುರಸಭೆ ಅಧ್ಯಕ್ಷ ಎನ್.ಗಂಗಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.
ಪಟ್ಟಣದ ಗೌತಮ ಬುದ್ಧ ಕಾಲೇಜು ವತಿಯಿಂದ ಕುಸ್ತಿ ಪಟು ಬಿ.ಎಸ್.ಲಕ್ಷ್ಮೀಕಾಂತ್‌ಗೆ ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ  ಅವರು ಮಾತನಾಡಿದರು.
ಮಧುಗಿರಿ ಪುರಸಭೆ ವತಿಯಿಂದ ರು. 5 ಸಾವಿರ ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿದರು. ಪ್ರಾಂಶುಪಾಲ ಟಿ.ಗೋವಿಂದರಾಜು ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಟತುಂಗೋಟಿ ರಾಮಣ್ಣ, ಪುರಸಭೆ ಸದಸ್ಯ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement