ಕೃಷಿ ಮಾಹಿತಿ ಆಂದೋಲನ, ರೈತರ ದಿನಾಚರಣೆ
ತಿಪಟೂರು: ಕೃಷಿ ಇಲಾಖೆ ಹಾಗೂ ತಾಲೂಕು ಕೃಷಿಕ ಸಮಾಜ ಹಾಗೂ ಕೃಷಿ ವಿಜ್ಞಾನ ಕೇಂದ್ರ ಸೇರಿದಂತೆ ಮತ್ತಿತರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕೃಷಿ ಮಾಹಿತಿ ಆಂದೋಲನ, ರೈತರ ದಿನಾಚರಣೆ ಸಮಾರಂಭವನ್ನು ಡಿ.23ರ ಸೋಮವಾರ ಬೆಳಿಗ್ಗೆ 10.30ಕ್ಕೆ ಪಟ್ಟಣದ ಎಪಿಎಂಸಿ ಅವರಣದಲ್ಲಿ ಏರ್ಪಡಿಸಲಾಗಿದೆ.
ಅಧ್ಯಕ್ಷತೆ ಶಾಸಕ ಕೆ.ಷಡಕ್ಷರಿ ವಹಿಸಲಿದ್ದು, ಉದ್ಘಾಟನೆ ಎಪಿಎಂಸಿ ಅಧ್ಯಕ್ಷ ಪ್ರಕಾಶ್ ನೆರವೇರಿಸಲಿದ್ದಾರೆ. ವಸ್ತುಪ್ರದರ್ಶನದ ಉದ್ಘಾಟನೆಯನ್ನು ತಾ.ಕೃಷಿ ಕ ಸಮಾಜದ ಅಧ್ಯಕ್ಷ ಕೆ.ಎಸ್.ದೇವರಾಜು ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ತಾ.ಪಂ. ಅಧ್ಯಕ್ಷ ಭಾನುಪ್ರಕಾಶ್, ಕೆವಿಕೆಯ ಕಾರ್ಯಕ್ರಮ ಸಂಯೋಜಕರಾದ ಡಾ. ಜಿ.ಎಂ.
ಸುಜಿತ್, ಡಾ.ಕೆ.ಆರ್.ಶ್ರೀನಿವಾಸ್. ತಾಲೂಕು ಕೃಷಿ ಕ ಸಮಾಜದ ಜಿಲ್ಲಾ ಪ್ರತಿನಿಧಿ ಕೆ.ಎಸ್. ಸದಾಶಿವಯ್ಯ ಮತ್ತಿತರರು ಭಾಗವಹಿಸಲಿದ್ದಾರೆ.
ವಸ್ತು ಪ್ರದರ್ಶನ, ಕೃಷಿ ತಜ್ಞರೊಂದಿಗೆ ಸಂವಾದ, ಸಂಚಾರಿ ಕೃಷಿ ಮಾಹಿತಿ ಘಟಕ, ವಿವಿಧ ಅಭಿವೃದ್ಧಿ ಇಲಾಖೆಗಳ ಮಾಹಿತಿ ಬಿಂಬಿಸುವ ಸ್ತಬ್ಧ ಚಿತ್ರಗಳು ಹಾಗೂ ಪ್ರಗತಿ ಪರ ರೈತರ ಅನಿಸಿಕೆಗಳು ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.