ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಾರ್ಯ ಶ್ಲಾಘನೀಯ: ಗೋಪಾಲ್‌ರಾಜ್ ಅರಸ್

Srinivasa Murthy VN
Updated On : 21 Dec 2013, 11:51 am

ತುಮಕೂರು: ಶ್ರವಣದೋಷವುಳ್ಳ ಹಾಗೂ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿದರೆ ಎಂತಹವರ ಮನಸ್ಸು ಕರಗುತ್ತದೆ. ಆದರೆ ಇಂತಹ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೆಲಸ ತುಂಬಾ ಶ್ಲಾಘನೀಯವಾದುದು ಎಂದು ಅಖಿಲ ಕರ್ನಾಟಕ ರಾಜ್ಯ ಕ್ಷತ್ರಿಯ ಮಹಾ ಸಭಾದ ಕಾರ್ಯಾಧ್ಯಕ್ಷ ಗೋಪಾಲ್‌ರಾಜ್ ಅರಸ್ ಅಭಿಪ್ರಾಯಪಟ್ಟರು.
ನಗರದ ಬೆಳಗುಂಬದಲ್ಲಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಕ್ಷತ್ರಿಯ ಮಹಾ ಸಭಾದ ವತಿಯಿಂದ ಹಾಗೂ ಪೃಥ್ವಿರಾಜ್ ಅರಸ್ ಅವರ ಹುಟ್ಟು ಹಬ್ಬದ ಅಂಗವಾಗಿ ಮಕ್ಕಳಿಗೆ ಹಾಲು, ಬಾಳೆಹಣ್ಣು ಮತ್ತು ಸಿಹಿಯನ್ನು ಹಂಚಿ ಮಾತನಾಡಿದರು.
ಶ್ರವಣದೋಷವುಳ್ಳ ಹಾಗೂ ಬುದ್ಧಿಮಾಂದ್ಯ ಮಕ್ಕಳಿಗೆ ಸರ್ಕಾರದ ಸೌಲಭ್ಯಗಳು ಅಗತ್ಯ ಪ್ರಮಾಣದಲ್ಲಿ ದೊರಕಬೇಕು ಇದರ ಜೊತೆಗೆ ಮುಂದಿನ ದಿನಗಳಲ್ಲಿ ನಮ್ಮ ಸಂಘದ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಗೆ ತಟ್ಟೆ ಮತ್ತು ಲೋಟಗಳನ್ನು ಕೊಡಿಸುವುದಾಗಿ ಹೇಳಿದರು.
ಇಂತಹ ಬುದ್ಧಿಮಾಂದ್ಯ ಮಕ್ಕಳನ್ನೊಳಗೊಂಡ ಸಾಕ್ಷ್ಯಚಿತ್ರವನ್ನು ನಿರ್ಮಾಣ ಮಾಡಿ ಗೋವಾದಲ್ಲಿ ನಡೆಯುವ ಫಿಲಂ ಫೆಸ್ಟಿವಲ್‌ಗೆ ಕಳಿಸಿಕೊಡಲಾಗುವುದು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಯಾವುದೇ ಒಂದು ಕಾರ್ಯಕ್ರಮಗಳನ್ನು ಆಚರಣೆ ಮಾಡಿದರೆ ಅದು ತುಮಕೂರಿನ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಬುದ್ಧಿಮಾಂದ್ಯ ಮತ್ತು ಶ್ರವಣದೋಷವುಳ್ಳ ಮಕ್ಕಳೊಂದಿಗೆ ಆಚರಿಸಲಾಗುವುದು ಎಂದು  ಅವರು ತಿಳಿಸಿದರು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ರಾಜ್ಯ ಕ್ಷತ್ರಿಯ ಮಹಾಸಭಾದ ಅಧ್ಯಕ್ಷ ಎನ್. ಲಕ್ಷ್ಮಣ್‌ರಾಜ್ ಅರಸ್, ಪೃಥ್ವಿರಾಜ್ ಅರಸ್ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement