ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಲಿಂಗತ್ವ ಅಲ್ಪಸಂಖ್ಯಾತರರಿಗೆ ಸಾಲ ಒದಗಿಸಿ

Vishwanath S
Updated On : 24 Dec 2013, 12:45 pm

ಕನ್ನಡಪ್ರಭ ವಾರ್ತೆ, ತುಮಕೂರು, ಡಿ.23
ಲಿಂಗತ್ವ ಅಲ್ಪಸಂಖ್ಯಾತರರು ಸ್ವಯಂ ಉದ್ಯೋಗ ಕೈಗೊಳ್ಳಲು ಬೇಕಾದ ತರಬೇತಿ ಮತ್ತು ಆರ್ಥಿಕ ಸಹಾಯಧನ ನೀಡುವ ಸಂಬಂಧ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತರರಿಗೆ ಸಾಲ ಸೌಲಭ್ಯಗಳನ್ನು ಒದಗಿಸುವ ಕುರಿತ ಜಿಲ್ಲಾ ಮಟ್ಟದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲಿಂಗತ್ವ ಅಲ್ಪಸಂಖ್ಯಾತರ ಪರವಾಗಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಂಸ್ಥೆಗಳ ವಿವರ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಫಲಾನುಭವಿಗಳ ಪಟ್ಟಿಯನ್ನು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕಿ ಸುಜಾತಾ ಅವರಿಗೆ ಸೂಚಿಸಿದರು.
ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕೆಲವು ರೂಪು ರೇಷೆಗಳನ್ನು ಅನುಸರಿಸಿ, ತಮ್ಮ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಕ್ರಮ ವಹಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಈ ಸಮುದಾಯದ ಪರ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳ ಮೂಲಕ ಉಪನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಲಿಂಗತ್ವ ಅಲ್ಪಸಂಖ್ಯಾತರರನ್ನು ಗುರುತಿಸುವಂತೆ ತಿಳಿಸಿದರು.
ಸಾಲ ಸೌಲಭ್ಯ: ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು ಹಾಗೂ ಸ್ವಉದ್ಯೋಗ ಮಾರ್ಗದರ್ಶನ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳು ಹಾಗೂ ಯೋಜನಾಧಿಕಾರಿಗಳ  ಸಹಾಯದೊಂದಿಗೆ ಸ್ವಸಹಾಯ ಗುಂಪುಗಳ ರಚನೆ ಮಾಡುವಂತೆ ಹಾಗೂ ರಚನೆಯಾದ ಗುಂಪುಗಳಿಗೆ ಅವರು ಅಪೇಕ್ಷಿಸುವ ವೃತ್ತಿಯಲ್ಲಿ ತರಬೇತಿ ನೀಡುವಂತೆ ಸೂಚಿಸಿದರು.
ಲಿಂಗತ್ವ ಅಲ್ಪಸಂಖ್ಯಾತರುಗಳ (ಹಿಜ್ರಾಗಳು, ಕೋಥಿಗಳು, ಜೋಗಪ್ಪಂದಿರು, ಎಫ್.ಟು.ಎಂ.ಎಂ.ಟು.ಎಫ್. ಮಂಗಳಮುಖಿಯರು) ಕಲ್ಯಾಣಕ್ಕಾಗಿ ಉದ್ದೇಶಿಸಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮವನ್ನು ನೋಡಲ್ ಸಂಸ್ಥೆಯೆಂದು ನೇಮಿಸಲಾಗಿದ್ದು, ನಿಗಮದಿಂದ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಮೊದಲಿಗೆ ಅರ್ಹ ಫಲಾನುಭವಿಗಳಿಗೆ ನೀಡುವಂತೆ, ತದನಂತರ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಇಲಾಖೆಯ ವತಿಯಿಂದ 20 ಸಾವಿರ ರು. ಸಾಲ ಸೌಲಭ್ಯ ಮತ್ತು ಬ್ಯಾಂಕ್‌ಗಳ ಸಹಕಾರದೊಂದಿಗೆ ಹೆಚ್ಚಿನ ಸಾಲ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಗೆ ಮಾಹಿತಿ ನೀಡಿದ ಉಪನಿರ್ದೇಶಕಿ ಸುಜಾತಾ ಅವರು ಜಿಲ್ಲೆಯಲ್ಲಿ  ಸಹಬಾಳ್ವೆ  ಮತ್ತು ಬರ್ಡ್ಸ್ ಎಂಬ ಸಮುದಾಯ ಆಧಾರಿತ ಸಂಸ್ಥೆಗಳು ಜಿಲ್ಲೆಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಪರವಾಗಿ ಕೆಲಸ ನಿರ್ವಹಿಸುತ್ತಿದ್ದು, ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ನೆರವು ಕೋರಿ ಇಲ್ಲಿಯವರೆಗೆ ಒಟ್ಟು 30 ಅರ್ಜಿಗಳನ್ನು ಲಿಂಗತ್ವ ಅಲ್ಪಸಂಖ್ಯಾತರರು ಸಲ್ಲಿಸಿರುತ್ತಾರೆ ಎಂದು ವಿವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement