ಕರಡಾಳು ಶಾಲೆಯಲ್ಲಿ ಕಲಿಕೋತ್ಸವ
ತಿಪಟೂರು: ತಾಲೂಕಿನ ಕರಡಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲಿಕೋತ್ಸವ ಸಮಾರಂಭದಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಇದೇ ಶಾಲೆಯ ವಿದ್ಯಾರ್ಥಿಗಳಾದ ನಾಗರಾಜು, ಹಾಲೇಶ್ ಅವರಿಗೆ ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಶಿಕ್ಷಕರು, ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು ಇಲಾಖಾ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.