ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ನಾಳೆ ರೈಲ್ವೆ ಅಭಿವೃದ್ಧಿ ಕುರಿತ ಸಂವಾದ

Mainashree
Updated On : 27 Dec 2013, 10:22 am

ತುಮಕೂರು: ತುಮಕೂರು-ಬೆಂಗಳೂರು ರೇಲ್ವೇ ಪ್ರಯಾಣಿಕರ ಅನುಕೂಲಕ್ಕಾಗಿ ಸ್ಥಾಪಿಸಲಾಗಿರುವ ನಮ್ಮ ವೇದಿಕೆಯಿಂದ ಡಿ.29 ರ ಭಾನುವಾರದಂದು ತುಮಕೂರು ಜಿಲ್ಲೆಯ ರೇಲ್ವೇ ಅಭಿವೃದ್ಧಿ ಕುರಿತ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮ ಬೆಳಗ್ಗೆ 10 ಗಂಟೆಯಿಂದ ತುಮಕೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
ತುಮಕೂರು ಸಂಸದ ಜಿ.ಎಸ್. ಬಸವರಾಜು ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಟಿ. ಬಿ. ಜಯಚಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತುಮಕೂರು ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು ಮತ್ತು ತುಮಕೂರಿನ ಗಣ್ಯ ನಾಗರಿಕರನ್ನು ಆಹ್ವಾನಿಸಲಾಗಿದೆ. ನೈಋತ್ಯ ರೇಲ್ವೇಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಛೇಂಬರ್ ಆಫ್ ಕಾಮರ್ಸ್, ತುಮಕೂರು ಚಾಪ್ಟರ್, ತುಮಕೂರು ಧಾನ್ಯ ವರ್ತಕರ ಸಂಘ, ಲಾರಿ ಮಾಲೀಕರ ಸಂಘ, ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಅಸೋಸಿಯೇಷನ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಆಸಕ್ತ ನಾಗರಿಕರು ಕೂಡಾ ಭಾಗವಹಿಸಬಹುದಾಗಿದೆ ಎಂದು ಕರಣಂ ರಮೇಶ್ ತಿಳಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement