ಬ್ರಾಹ್ಮಣ ಸಭಾ ಶ್ರದ್ಧಾಂಜಲಿ
ತುಮಕೂರು: ತುಮಕೂರಿನ ಶ್ರೀ ಶಂಕರಮಠದಲ್ಲಿ ನಡೆದ ಜಿಲ್ಲಾ ಬ್ರಾಹ್ಮಣ ಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪನವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಲಾಯಿತು.
ದಿವಂಗತರ ಗೌರವಾರ್ಥ ಎರಡು ನಿಮಿಷ ಮೌನ ಆಚರಿಸಲಾಯಿತು. ಮೃತರ ಕುಟುಂಬಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಕೋರಲಾಯಿತು.
ಜಿಲ್ಲಾ ಬ್ರಾಹ್ಮಣ ಸಭಾದ ಅಧ್ಯಕ್ಷ ಸಿ.ವಿ. ಶ್ರೀನಿವಾಸಮೂರ್ತಿ, ಪ್ರಧಾನ ಕಾರ್ಯದರ್ಶಿ ಎಚ್.ಎಸ್. ರಾಘವೇಂದ್ರ, ವಿಪ್ರ ಸಮಾಜದ ಮುಖಂಡರಾದ ಕೈಗಾರಿಕೋದ್ಯಮಿ ಎಚ್.ಜಿ. ಚಂದ್ರಶೇಖರ್, ನಗರಸಭಾ ಸದಸ್ಯ ಎನ್.ಆರ್. ನಾಗರಾಜರಾವ್, ಆಡಿಟರ್ ಕೆ. ನರಸಿಂಹಮೂರ್ತಿ, ಶ್ರೀ ಶಂಕರ ಸೇವಾ ಸಮಿತಿ ಕಾರ್ಯದರ್ಶಿ ವೆಂಕಟನಾರಾಯಣ, ಜಿಲ್ಲಾ ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಮದರ್ ಇಂಡಿಯಾ ಸತ್ಯನಾರಾಯಣ, ಕಾರ್ಯದರ್ಶಿ ಕೆ. ಹಿರಿಯಣ್ಣ, ಯೋಗತಜ್ಞ ಎಂ.ಕೆ. ನಾಗರಾಜರಾವ್ ಮತ್ತಿತರ ಗಣ್ಯರು ಸಂತಾಪ ಸೂಚಿಸಿದರು.