ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ವಿಪತ್ತು ನಿಯಂತ್ರಣದ ಬಗ್ಗೆ ಅರಿವು ಮೂಡಿಸುವುದು ಅಗತ್ಯ

Mainashree
Updated On : 27 Dec 2013, 10:20 am

ತುಮಕೂರು: ವಿಪತ್ತು ನಿಯಂತ್ರಣದ ಬಗ್ಗೆ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವುದು ತುಂಬಾ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಕರೆ ನೀಡಿದರು.
ತುಮಕೂರಿನ ಸರ್ಕಾರಿ ಕಿರಿಯ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಗೃಹರಕ್ಷಕ ದಳ, ಅಗ್ನಿಶಾಮಕದಳ ಮತ್ತು ತುರ್ತು ಸೇವೆಗಳ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವಿಪತ್ತು ಕಡಿತಗೊಳಿಸುವ ದಿನಾಚರಣೆ ಉದ್ಘಾಟಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.
ವಿಪತ್ತು ಉಂಟಾದ ಸಂದರ್ಭದಲ್ಲಿ ಮೌನ ವಹಿಸದೇ ಸ್ಪಂದಿಸುವ ಮೂಲಕ ನೋವಿನಿಂದ ಪಾರು ಮಾಡಬೇಕೆಂದರು.  ವಿಪತ್ತುಗಳಿಂದ ತಪ್ಪಿಸಿಕೊಳ್ಳಲು ಮತ್ತು ವಿಪತ್ತುಗಳನ್ನು ಸಮರ್ಪಕವಾಗಿ ಎದುರಿಸಲು ಸನ್ನದ್ಧರಾಗಬೇಕು. ಈ ವಿಪತ್ತುಗಳ ಬಗ್ಗೆ ಜನ ಸಮುದಾಯದ ಕರ್ತವ್ಯ ಮತ್ತು ಜವಾಬ್ದಾರಿ ಬಗ್ಗೆ ಅರಿವು ಮೂಡಿಸುವುದೇ ರಾಷ್ಟ್ರೀಯ ವಿಪತ್ತು ಮಿತಗೊಳಿಸುವ ದಿನಾಚರಣೆಯ ಉದ್ದೇಶವಾಗಿದೆ ಎಂದು ಹೇಳಿದರು.
ಜಿಲ್ಲಾ ಹೆಚ್ಚುವರಿ ಎಸ್.ಪಿ ಆರ್. ಲಕ್ಷ್ಮಣ್ ಮಾತನಾಡಿ ಬಾಂಬ್ ಸ್ಫೋಟ, ಬೆಂಕಿ ಅನಾಹುತ, ಕಟ್ಟಡ ಕುಸಿತ, ವಾಹನ ಅಪಘಾತಗಳು ಸಂಭವಿಸಿದರೆ ಕೂಡಲೇ ಸ್ಪಂದಿಸುವ ಮೂಲಕ ಜೀವ ಹಾನಿಯಿಂದ ಪಾರು ಮಾಡಬೇಕೆಂದು ಕೋರಿದರು.
ಗೃಹರಕ್ಷಕ ದಳ ಸೇರಿದಂತೆ ವಿವಿಧ ಸಂಘಸಂಸ್ಥೆಗಳವರು ಜನರನ್ನು ವಿಪತ್ತಿನಿಂದ ಪಾರು ಮಾಡುವಲ್ಲಿ ಶ್ರಮಿಸುತ್ತಿದೆ ಎಂದು ಶ್ಲಾಘಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಪತ್ರಕರ್ತ ಚೀ.ನಿ. ಪುರುಷೋತ್ತಮ್, ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಕೆ. ರವಿಕುಮಾರ್, ಜಯಣ್ಣ ಬಿಳಿಗೆರೆ, ಉಪ ಕಮಾಂಡೆಂಟ್ ನಾಗರಾಜರಾವ್, ಪಿ. ಸುಧೀರ್, ಅಗ್ನಿಶಾಮಕ ದಳದ ಅಧಿಕಾರಿ ಪುಟ್ಟಯ್ಯ, ಮತ್ತಿತತರು ಪಾಲ್ಗೊಂಡಿದ್ದರು.
ಕಾರ್ಯಕ್ರಮದ ನಂತರ ಅಗ್ನಿಶಾಮಕದಳದವರು ಮತ್ತು ಗೃಹರಕ್ಷಕದಳದವರು ಅಣುಕು ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement