ಪರಮೇಶ್ವರ್ಗೆ ಡಿಸಿಎಂ ಪಟ್ಟಕ್ಕೆ ಪಟ್ಟು
ತುಮಕೂರು: ಲೋಕಸಭಾ ಚುನಾವಣೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಪಟ್ಟ ನೀಡಬೇಕೆಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸಭೆಯಲ್ಲಿ ಒತ್ತಾಯಿಸಲಾಯಿತು.
ಕಳೆದ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿಯ ಮತದಾರರ ಪಕ್ಷವನ್ನು ಬೆಂಬಲಿಸಲಿದ್ದಾರೆ. ಆದ್ದರಿಂದ ಎಐಸಿಸಿ ಮುಖಂಡರು ಈ ಬಗ್ಗೆ ಗಮನಹರಿಸಿ ಡಾ.ಜಿ.ಪರಮೇಶ್ವರ್ ಅವರಿಗೆ ಸೂಕ್ತ ಸ್ಥಾನ ಒದಗಿಸಬೇಕು. ಇಲ್ಲದಿದ್ದ ಪಕ್ಷದಲ್ಲಿ ಪರಿಶಿಷ್ಟ ಜಾತಿಯ ಮತದಾರರು ಚದುರಿ ಹೋಗುವ ಸಾಧ್ಯತೆಯಿದೆ ಎಂದು ಸಭೆಯಲ್ಲಿ ಪದಾಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಎಐಸಿಸಿ ಮುಖಂಡರ ಮೇಲೆ ಒತ್ತಡ ಹಾಕಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.