ಡಾ.ವಿಷ್ಣುವರ್ಧನ್ ಪುಣ್ಯತಿಥಿ ಪ್ರಯುಕ್ತ ಹಾಲು, ಹಣ್ಣು, ಬ್ರೆಡ್ ವಿತರಣೆ
ತಿಪಟೂರು: ಡಾ.ವಿಷ್ಣುಸೇನಾ ಸಮಿತಿ ವತಿಯಿಂದ ಡಾ. ವಿಷ್ಣುವರ್ಧನ್ ಅವರ ಪುಣ್ಯತಿಥಿ ಅಂಗವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮತ್ತು ಕುಮಾರ್ ಆಸ್ಪತ್ರೆ ಒಳರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಿಸಲಾಯಿತು.
ಡಾ.ವಿಷ್ಣುಸೇನಾ ಸಮಿತಿ ಉದ್ಘಾಟನಾ ಸಮಾರಂಭದಲ್ಲಿ ಷಡಕ್ಷರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಮಾಜಿ ಶಾಸಕ ಬಿ.ಸಿ.ನಾಗೇಶ್, ಡಾ. ಶ್ರೀಧರ್, ಡಾ.ವಿಷ್ಣುಸೇನಾ ಸಮಿತಿ ಅಧ್ಯಕ್ಷ ಸುಂದರ್, ಪ್ರಧಾನ ಕಾರ್ಯದರ್ಶಿ ಶಿವು, ಸಂಘಟನಾ ಕಾರ್ಯದರ್ಶಿ ಉಮೇಶ್ ಸೇರಿದಂತೆ ಸಮಿತಿಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಂತರ ಗ್ರಾಮದೇವತೆ ಶ್ರೀ ಕೆಂಪಮ್ಮದೇವಿ ದೇವಸ್ಥಾನದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಡಾ. ವಿಷ್ಣು ಅವರ ಭಾವಚಿತ್ರದ ಮೆರವಣಿಗೆ ಮಾಡಲಾಯಿತು.