ಇಂದು ಮಾಜಿ ಸಿಎಂ ಯಡಿಯೂರಪ್ಪಗೆ ಅಭಿನಂದನೆ
ತಿಪಟೂರು: ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ತಾಲೂಕು ಕೆಜೆಪಿ ಘಟಕದ ವತಿಯಿಂದ ಶನಿವಾರ ಅಭಿನಂದನಾ ಸಮಾರಂಭ ಹಾಗೂ ಬಹಿರಂಗ ಸಭೆಯನ್ನು ಇಲ್ಲಿನ ಹಾಲ್ಕುರಿಕೆ ರಸ್ತೆಯ ಸುಜ್ಞಾನ ಶಾಲೆ ಪಕ್ಕದ ವಿಶಾಲ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕೆಜೆಪಿ ಮುಖಂಡ ಟಿ.ಎಸ್.ಲೋಕೇಶ್ವರ ತಿಳಿಸಿದ್ದಾರೆ.
ವಿವಿಧ ಮಠಾಧೀಶರು, ಸಂಸದ ಜಿ.ಎಸ್. ಬಸವರಾಜು, ಕೆಜೆಪಿ ರಾಜ್ಯ ಮುಖಂಡ ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಧನಂಜಯಕುಮಾರ್, ಎಂ.ಡಿ.ಲಕ್ಷ್ಮಿನಾರಾಯಣ್, ಕೆಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ, ಜ್ಯೋತಿ ಗಣೇಶ್, ಮಾಜಿ ಶಾಸಕರಾದ ಬಿ.ನಂಜಾಮರಿ, ಎಸ್.ಪಿ.ಗಂಗಾಧರಪ್ಪ, ಟಿ.ಜಿ. ತಿಮ್ಮೇಗೌಡ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.