'ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿ'
ತುಮಕೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ವಾಕ್ಪ್ರತಿಭೆ ಪ್ರದರ್ಶಿಸಬೇಕು ಎಂದು ಉಪನ್ಯಾಸಕ ಪ್ರೊ. ಮಹಾಲಿಂಗಯ್ಯ ಸಲಹೆ ನೀಡಿದರು.
ಅವರು ಹೆಬ್ಬೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿಕ್ಷಣ ಕೃಷಿ ಪ್ರತಿಷ್ಠಾನ ಆಶ್ರಯದಲ್ಲಿ ಭಾವಗೀತೆ ಮತ್ತು ಚರ್ಚಾ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶಿಕ್ಷಣ ಕೃಷಿ ಪ್ರತಿಷ್ಠಾನ ಅಧ್ಯಕ್ಷ ಸಿ. ಪಾಪಣ್ಣ ಮಾತನಾಡಿ ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ಸಮಾಜಮುಖಿಗಳಾಗಲೆಂದು ಆಶಿಸಿದರು.ಎಸ್ಐ ಸಿದ್ದರಾಜು ವಿದ್ಯಾರ್ಥಿಗಳಲ್ಲಿ ಕಾನೂನು ಪರಿಪಾಲನೆ ಹಾಗೂ ಶಿಸ್ತು ಸಂಯಮದಿಂದ ವರ್ತಿಸುವಂತೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಬಿ.ಸಿ. ಸಣ್ಣಚಿಕ್ಕಯ್ಯನವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಕಾಲೇಜು ಮಟ್ಟದಲ್ಲಿ ಇಂತಹ ಸ್ಪರ್ಧೆಗಳು ಮರೆಯಾಗುತ್ತಿರುವ ಸಂದರ್ಭದಲ್ಲಿ ಪುನಶ್ಚೇತನ ಆಗಬೇಕೆಂದರು.
ವಿದ್ಯಾರ್ಥಿಗಳು ಹಾಗೂ ಇಂತಹ ಕಾರ್ಯಕ್ರದಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸಾಮಾಜಿಕ ಚಿಂತನೆ ಬಗ್ಗೆ ಪ್ರೌಢಿಮೆಯನ್ನು ರೂಢಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು. ತೀರ್ಪುಗಾರರಾಗಿ ಪುಷ್ಪ ಭಾರತಿ, ಪ್ರೊ. ಕೆ.ಎಸ್. ಚೈತಾಲಿ ಹಾಗೂ ಪ್ರೊ. ಕೆ. ಲಕ್ಷ್ಮೀರಂಗಯ್ಯ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 25 ಕಾಲೇಜಿನಿಂದ ಸ್ಪರ್ಧಿಗಳು ಆಗಮಿಸಿದ್ದು ಪ್ರಶಸ್ತಿ ಪತ್ರ ಹಾಗೂ ಸ್ಪರ್ಧೆಯಲ್ಲಿ ತಲಾ 3 ಬಹುಮಾನ ನೀಡಲಾಯಿತು. ಸಾಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ. ಬಿ.ಸಿ. ಮೋಹನ್ಕುಮಾರ್ ಸ್ವಾಗತಿಸಿದರು. ಡಾ. ಜಿ.ಕೆ. ನಾಗರಾಜು ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.