ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

'ದಿನಚರಿ ಹಂಚಿಕೆಗೂ, ಇಒಗೂ ಸಂಬಂಧವಿಲ್ಲ'

Parashurama
Updated On : 1 Feb 2013, 10:52 am

ಶಿರಾ: ಶಿಕ್ಷಕರ ದಿನಚರಿ ಪುಸ್ತಕ ಹಂಚಿಕೆಗೂ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೂ ಯಾವುದೇ ಸಂಬಂಧ ಇಲ್ಲ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಹೆಚ್.ಹಿಮಂತರಾಜು, ಪ್ರಧಾನ ಕಾರ್ಯದರ್ಶಿ ಕೆ.ಸಿ.ಜೀವನ್ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು,   ಕರ್ನಾಟಕ ರಾಜ್ಯ ಪ್ರಾಥಮಿಕ ಪಾಠಶಾಲಾ ಶಿಕ್ಷಕರ ಸಂಘದ ವತಿಯಿಂದ ಪಟ್ಟಣದಲ್ಲಿ ಶೈಕ್ಷಣಿಕ ಸಮ್ಮೇಳನ ನಡೆಸಿದ್ದು, ಅಂದು ಅನೇಕ  ಜನಪ್ರತಿನಿಧಿ ಸಮಾಜ ಸೇವಕರು, ದಾನಿಗಳು, ಶಿಕ್ಷಕರಿಗೆ ನೀಡಿದ ಕೊಡುಗೆ ಸಮಾರಂಭದಲ್ಲಿ ಬಿಡುಗಡೆಗೊಳಿಸಿ ಶಿಕ್ಷಕರಿಗೆ ಹಂಚಲಾಯಿತು.  ಅದರ ಬಾಬ್ತು ಶಿಕ್ಷಕರ ದಿನಚರಿಯೂ ಕೂಡ  ಒಂದಾಗಿದ್ದು, ಅವುಗಳನ್ನು ಸಮಾರಂಭದಲ್ಲಿ ಹಂಚಲು ಸಾಧ್ಯವಾಗದೆ ಕ್ಲಸ್ಟರ್ ಸಮಾಲೋಚನಾ ಸಭೆಗಳು ನಡೆಯುವ ಒಂದು ದಿನ ಮೊದಲು ಕ್ಲಸ್ಟರ್‌ಗಳಲ್ಲಿರುವ ನಿರ್ದೇಶಕರಿಗೆ ವಿತರಿಸಿ ಸಮಾಲೋಚನಾ ಸಭೆಗಳಲ್ಲಿ ಬಿಡುವಿನ ವೇಳೆಯಲ್ಲಿ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಸಂಘದ ಪದಾಧಿಕಾರಿಗಳ ಮೂಲಕ ದಿನಚರಿ ಹಂಚಿಸಿರುತ್ತಾರೆ.  ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಆದರೆ, ದಿನಚರಿ ಹಂಚಿಕೆಗೂ ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೂ ಯಾವುದೇ ಸಂಬಂಧವಿರುವುದಿಲ್ಲ. ಇದರ ಪೂರ್ವಾಪರ  ತಿಳಿದುಕೊಳ್ಳದೆ ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ಕೆಲವರು ಪತ್ರಿಕಾ ಹೇಳಿಕೆ ನೀಡಿರುವುದು ಸರಿಯಲ್ಲ. ಇದನ್ನು ಸಮಸ್ತ ಶಿಕ್ಷಕರಿಂದ ಮತ್ತು ಸಂಘವು ಖಂಡಿಸುತ್ತದೆ ಎಂದು ತಮ್ಮ ಹೇಳಿಕೆಯಲ್ಲಿ  ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಿಳಿಸಿದೆ.
ನಾಳೆ ಜೆಡಿಎಸ್ ಸಮಾವೇಶ
ತುಮಕೂರು: ಕೊರಟಗೆರೆಯ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಫೆ. 3 ರಂದು ಬೆಳಗ್ಗೆ 11 ಗಂಟೆಗೆ ಜೆಡಿಎಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ.  ಕಾರ್ಯಕ್ರಮವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮಾರ್ಗದರ್ಶನ ನೀಡಲಿದ್ದಾರೆ. ಪ್ರಾಸ್ತಾವಿಕವಾಗಿ ಸಿ. ಚನ್ನಿಗಪ್ಪ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣ, ಪಿ.ಜಿ.ಆರ್. ಸಿಂಧ್ಯಾ, ಜಮೀರ್ ಅಹಮದ್, ಬಸವರಾಜ್ ಹೊರಟ್ಟಿ, ಬಂಡೆಪ್ಪ ಕಾಶಂಪುರ, ಡಿ. ನಾಗರಾಜಯ್ಯ, ಬಿ. ಸತ್ಯನಾರಾಯಣ್, ರಂಗಮುತ್ತಯ್ಯ, ಜೆ.ಎನ್. ನರಸಿಂಹರಾಜು, ಡಾ. ಎಂ.ಆರ್. ಹುಲಿನಾಯ್ಕರ್ ಹಾಗೂ ಪ್ರೇಮ ಮಹಾಲಿಂಗಪ್ಪ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮುಖಂಡರು ಉಪಸ್ಥಿತರಿರುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments