ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

'ಶ್ರದ್ಧೆ ಬೆಳೆಸಿಕೊಂಡಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ'

Parashurama
Updated On : 1 Feb 2013, 10:44 am

ಕೊರಟಗೆರೆ: ವೀಕ್ಷಣೆ, ವಿಶ್ಲೇಷಣೆ, ಸಂಯೋಜನೆ ಕಡೆ ಮನೋಧರ್ಮ ಬೆಳೆಸಿಕೊಂಡಾಗ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಖ್ಯ ಅಭಿಯಂತರ ಜಯಪ್ರಕಾಶ್ ಅಭಿಪ್ರಾಯಪಟ್ಟಿದ್ದಾರೆ.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕ್ರೀಡೆ, ಸಾಂಸ್ಕೃತಿಕ ಹಾಗೂ ಎನ್‌ಎಸ್‌ಎಸ್ ಚಟುವಟಿಕೆ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಅದನ್ನು ಸೂಕ್ತ ರೀತಿಯಲ್ಲಿ ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬಾಳಲು ಸಾಧ್ಯ. ಕನಸುಗಳು ಯೋಜನೆಗಳಾಗಿ ರೂಪುಗೊಂಡಲ್ಲಿ ಯಶಸ್ಸು ಸುಲಭವಾಗಿ ಜೀವನದಲ್ಲಿ ದೊರೆಯುತ್ತದೆ. ಯಶಸ್ಸಿನ ಹಿಂದೆ ಶ್ರಮ, ತಾಳ್ಮೆಯ ಅಗತ್ಯವಿದೆ ಎಂದರು.ಪಟ್ಟಣ ಪಂಚಾಯಿತಿ ಸದಸ್ಯ ಎ.ಡಿ.ಬಲರಾಮಯ್ಯ, ಪತ್ರಕರ್ತ ಗರಗದೊಡ್ಡಿ ನಟರಾಜು, ಜೆಡಿಎಸ್ ಮುಖಂಡ ಜಂಪೇನಹಳ್ಳಿ ನರಸಿಂಹರಾಜು, ಮಯೂರ ಗೋವಿಂದರಾಜು ತಾಪಂ ಅಧ್ಯಕ್ಷೆ ಅನಿತಾ ಅಶ್ವತ್ಥ್, ಜಿ.ಪಂ.ಸದಸ್ಯ ಸುಧಾಕರ್ ಲಾಲ್, ದಾಕ್ಷಾಯಿಣಿ ರಾಜಣ್ಣ, ಮುಖಂಡರಾದ ಹುಲಿಕುಂಟೆ ಮಲ್ಲಿಕಾರ್ಜುನ್, ಸಿದ್ದಲಿಂಗಪ್ಪ, ನಂಜಪ್ಪ, ಪ್ರಾಚಾರ್ಯ ಬಿ.ಜಯರಾಂ, ಮಂಜುನಾಥ್, ಇತರರು ಇದ್ದರು. ವಿದ್ಯಾರ್ಥಿಗಳಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments