ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಹೇಮಾವತಿ ನೀರು ತರುವಲ್ಲಿ ಸಂಸದ, ಶಾಸಕರು ವಿಫಲ: ಕಾಂಗ್ರೆಸ್ ಆರೋಪ

Parashurama
Updated On : 1 Feb 2013, 10:42 am

ಗುಬ್ಬಿ: ತಾಲೂಕಿನ ಕೆರೆಗಳಿಗೆ ಮತ್ತು ಗುಬ್ಬಿ ಪಟ್ಟಣಕ್ಕೆ ಕುಡಿಯುವ ನೀರನ್ನು ಒದಗಿಸುವ ಬಗ್ಗೆ ಸಂಸದ ಹಾಗೂ ಶಾಸಕರು ನಿರ್ಲಕ್ಷ್ಯ ವಹಿಸುವ ಮೂಲಕ  ಪಟ್ಟಣದ ಜನತೆಗೆ ದ್ರೋಹ ಎಸಗಿದ್ದಾರೆ ಎಂದು ಕೆಪಿಸಿಸಿ
ಸದಸ್ಯ ರಾದ             ಕೆ.ಆರ್.ತಾತಯ್ಯ ಮತ್ತಿತರರು ಆರೋಪಿಸಿದರು.
ಈ ಸಂಬಂಧ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲ ಪೀಡಿತ ಪ್ರದೇಶ ಎಂದು ಗೊತ್ತಿದ್ದರೂ ಹೇಮಾವತಿ ನೀರನ್ನು ಗುಬ್ಬಿ ತಾಲೂಕಿನ ಮಾರ್ಗ ಹರೇನಹಳ್ಳಿ, ಕೊಂಡ್ಲಿ ಕ್ರಾಸ್, ದೊಡ್ಡಗುಣಿ, ನಿಟ್ಟೂರು,ಚೇಳೂರು, ಹಾಗಲವಾಡಿ, ಹೊಸಕೆರೆ ಹಾಗೂ ಪಟ್ಟಣದ ಕೆರೆಗಳಿಗೆ ತುಂಬಿಸವಲ್ಲಿ ವಿಫಲರಾಗಿದ್ದು ಇದರಿಂದ ಈ ಭಾಗದ ರೈತ್ಯಾಪಿ ವರ್ಗ ವಲಸೆ ಹೋಗುವ ಪರಿಸ್ಧಿತಿ ಸ್ಧಳೀಯ ಶಾಸಕರು ಹಾಗೂ ಸಂಸದ ತಂದೊಡ್ಡಿರುವುದು  ಅವರ ಬೇಜವಾಬ್ದಾರಿತನ ತೋರಿಸುತ್ತದೆ ಎಂದು ಅವರು ಗುಡುಗಿದರು.  
ಕೆಪಿಸಿಸಿಯ ಮತ್ತೊಬ್ಬ ಸದಸ್ಯ ಟಿ.ಎಂ.ಗೌಡ ಮಾತನಾಡಿ, ಕೇಂದ್ರ ಸರ್ಕಾರ ಜನಪರ ಕಾಳಜಿಯನ್ನೊಂದಿದ್ದುಸ ಈಗಾಗಲೇ ಸಾಕಷ್ಟು ಹಣ ಬಿಡುಗಡೆ ಮಾಡಿದೆ. ಆದರೆ, ರಾಜ್ಯ ಬಿಜೆಪಿ ಸರ್ಕಾರ ಅದನ್ನು ಸಮಪರ್ಕವಾಗಿ ಉಪಯೋಗಿಸಿಕೊಳ್ಳುವಲ್ಲಿ ವಿಫಲವಾಗಿದೆ. ಮಾತ್ರವಲ್ಲ, ಆಭಿವೃದ್ಧಿ ವಿಚಾರದಲ್ಲಿ ಯಾವುದೇ ನಿರ್ಣಯ ತೆಗೆದುಕೊಳ್ಳದೆ ಕಣ್ಣಮುಚ್ಚಾಲೆ ಆಟ ಆಡುತ್ತಿದ್ದು, ಈ ನಿಟ್ಟಿನಲ್ಲಿ ಮಂದಿನ ದಿನಗಳಲ್ಲಿ ಕಾಂಗ್ರೆಸ್ ವತಿಯಿಂದ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದರು.ಪಾದಯಾತ್ರೆ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಭರತ್‌ಗೌಡ ಮಾತನಾಡಿ, ಆಧಾರ್ ಕಾರ್ಡ್ ಹಾಗೂ ಕೇಂದ್ರ ಸರ್ಕಾರದ ಹಲವು ಸವಲತ್ತುಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ತಿಳಿಸಿದ ಅವರು ಗುಬ್ಬಿ ತಾಲೂಕಿನಲ್ಲಿ 4 ಮತ್ತು 5 ರಂದು ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜ್ ಆವರಣದಲ್ಲಿ ಬೃಹತ್ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ತಾಲೂಕು ಯುವ ಕಾಂಗ್ರೆಸ್ ಆಧ್ಯಕ್ಷ ಲಕ್ಷ್ಮಣಗೌಡ, ಹಿಂದುಳಿದ ವರ್ಗದ ಅಧ್ಯಕ್ಷ ಬೀರಮಾರನಹಳ್ಳಿ ನರಸೇಗೌಡ, ಸಣ್ಣರಂಗಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments