ತುಮಕೂರು

ವಾಜಪೇಯಿ ಆರೋಗ್ಯಶ್ರೀ ಜಾರಿ

ತುಮಕೂರು: ಕಡುಬಡ ಕುಟುಂಬಗಳ ಆರೋಗ್ಯ ರಕ್ಷಣೆಗೆ ವಾಜಪೇಯಿ ಆರೋಗ್ಯಶ್ರೀ ಯೋಜನೆಯನ್ವಯ ಜಿಲ್ಲೆಯಲ್ಲಿ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಫಲಾನುಭವಿಗಳನ್ನು ಗುರುತಿಸಿ ಸೂಕ್ತಚಿಕಿತ್ಸೆ ಒದಗಿಸುವ ಸಲುವಾಗಿ ಎಂಪ್ರೆಸ್ ಕಾಲೇಜಿನಲ್ಲಿ ಇದೇ  10 ರಂದು ಬೆಳಿಗ್ಗೆ 10 ಗಂಟೆಗೆ ಬೃಹತ್ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಕೆ.ರಾಜು ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾಜಪೇಯಿ ಆರೋಗ್ಯಶ್ರೀ ಯೋಜನೆಯ ಅನುಷ್ಠಾನ ಕುರಿತು ಚರ್ಚಿಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗುರುತಿಸಲಾದ 7 ಗಂಭೀರ ಸ್ವರೂಪದ ಕಾಯಿಲೆಗಳಿಂದ ಬಳಲುವ ಕುಟುಂಬಗಳಿಗೆ ನೋಂದಾಯಿಸಿದ ಅತ್ಯುತ್ತಮ ದರ್ಜೆಯ ಸ್ಪೆಷಾಲಿಟಿ ಅಸ್ಪತ್ರೆಗಳಲ್ಲಿ ಉಚಿತವಾಗಿ ಶಸ್ತ್ರಕಿತ್ಸೆ ಮತ್ತು ಆರೈಕೆ ಸೌಲಭ್ಯ ದೊರಕಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಹೃದ್ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ಸುಟ್ಟಗಾಯ, ಅಪಘಾತ ಮತ್ತು ನವಜಾತ ಶಿಶುಗಳಿಗೆ ಸಂಬಂಧಿಸಿದ 7 ಗಂಭೀರ  ಸ್ವರೂಪದ ಕಾಯಿಲೆಗಳನ್ನು ಯೋಜನೆ ಒಳಗೊಂಡಿದ್ದು, ಈ ಕಾಯಿಲೆಗಳಿಗೆ ಸಂಬಂಧಪಟ್ಟ 402 ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸೆ ಮತ್ತು 50 ಅನುಸರಣಾ ಚಿಕಿತ್ಸೆಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಚಿಕಿತ್ಸಾ ಸೌಲಭ್ಯ: ಪ್ರತಿ ಬಿಪಿಎಲ್ ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ ರು. 1.50 ಲಕ್ಷ ಮೌಲ್ಯದ ಚಿಕಿತ್ಸಾ ಸೌಲಭ್ಯ ದೊರೆಯಲಿದ್ದು, ವಿಶೇಷ ಸಂದರ್ಭದಲ್ಲಿ ಇದಕ್ಕಿಂತ ಹೆಚ್ಚಿನ ಮೊತ್ತ ಅವಶ್ಯವಿದ್ದಲ್ಲಿ ಹೆಚ್ಚುವರಿ ಮೊತ್ತ 50  ಸಾವಿರ ಚಿಕಿತ್ಸಾ ಸೌಲಭ್ಯ ನೀಡಲಾಗುವುದು. ಈ ಸೌಲಭ್ಯ ಬಿಪಿಎಲ್ ಕುಟುಂಬದ ಯಾವುದೇ 5 ಜನರಿಗೆ ಮಾತ್ರ ಲಭ್ಯವಿರುತ್ತದೆ ಎಂದು ತಿಳಿಸಿದರು.
ಆರೋಗ್ಯ ಶಿಬಿರದಲ್ಲಿ ಗುರುತಿಸಲ್ಪಡುವ ಫಲಾನುಭವಿಯನ್ನು ಆತ ಅಯ್ಕೆ ಮಾಡುವ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುವುದು. ಚಿಕಿತ್ಸೆ ನಂತರ ಆತನನ್ನು ವಾಪಸ್ ಆತನ ಸ್ವಗ್ರಾಮಕ್ಕೆ ಕರೆತರಲಾಗುವುದು. ಗುರುತಿಸಿದ ಸ್ಪೆಷಾಲಿಟಿ ಆಸ್ಪತ್ರೆಗಳು ನಗದುರಹಿತ ಆರೈಕೆಯನ್ನು ಫಲಾನುಭವಿಗೆ ಒದಗಿಸುತ್ತವೆ. ಇದರ ಎಲ್ಲಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; 2 ದಿನಗಳ ಡೆಡ್‌ಲೈನ್‌!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ವಿವಿ ಫ್ರಟರ್ನಿಟಿ ಕಾರ್ಯಕ್ರಮದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ‘ನನ್ನ ಸರದಿ ಯಾವಾಗ?’ ಎಂದು ಕೂಗಿದ ಪುರುಷರು!

ಹೊಸ ಪಕ್ಷದ ಹೆಸರು ಘೋಷಿಸಿದ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್; 2027ರ ಯುಪಿ ಚುನಾವಣೆಗೆ ಸ್ಪರ್ಧೆ

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ