'ಬಿಎಸ್ಆರ್ ಕಾಂಗ್ರೆಸ್ನಿಂದ ಸ್ಪರ್ಧೆಗೆ ಸಿದ್ಧ'
ತಿಪಟೂರು: ತಿಪಟೂರು ವಿಧಾನಸಭಾ ಕ್ಷೇತ್ರಕ್ಕೆ ಬಿಎಸ್ಆರ್ ಟಿಕೆಟ್ ಆಕಾಂಕ್ಷೆಯಾಗಿದ್ದು, ಸ್ಪರ್ಧಿಸಲು ಸಿದ್ಧರಿರುವುದಾಗಿ ತಾಲೂಕು ಬಿ.ಎಸ್.ಆರ್.ಕಾಂಗ್ರೆಸ್ ಅಧ್ಯಕ್ಷ ಎಲ್.ಪಿ. ಯದುನಂದನ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿ.ಎಸ್.ಆರ್ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಭವಿಷ್ಯವಿದ್ದು, ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸುವ ಸಲುವಾಗಿ ಬೂತ್ ಮಟ್ಟದ ಸಮಿತಿಯ ಕಾರ್ಯವನ್ನು ಜರೂರಾಗಿ ಮಾಡಬೇಕೆಂದು ಕಾರ್ಯಕರ್ತರಿಗೆ ತಿಳಿಸಿದರು. ನಮ್ಮ ಪಕ್ಷದಿಂದ ಸ್ಪರ್ದಿಸಲು 10 ಜನ ಯೋಗ್ಯ ಅಭ್ಯರ್ಥಿಗಳಿದ್ದು ಅದರಲ್ಲಿ ನಾನು ಒಬ್ಬನಾಗಿದ್ದೇನೆ. ಆದರೆ ಟಿಕೆಟ್ ನೀಡುವುದು ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು ಎಂದರು. ತಾಲೂಕಿನ ಎಲ್ಲಾ ವಿದ್ಯಾವಂತ ಯುವಕರು ಪ್ರಗತಿಪರ ಸಂಘಟನೆಗಳು ಮತ್ತು ಸಾರ್ವಜನಿಕರು ಸ್ವಾಭಿಮಾನಿ ಶ್ರೀರಾಮುಲು ಅವರ ಬಿಎಸ್ಆರ್ ಕಾಂಗ್ರೆಸ್ ಬೆಂಬಲಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಎಸ್.ಸಿ.ಘಟಕದ ಅಧ್ಯಕ್ಷ ಟಿ.ಕೆ. ಮಂಜುನಾಥ್, ತಾ.ಪ್ರ. ಕಾರ್ಯದರ್ಶಿ ಎಲ್.ಎಸ್. ರಾಜಶೇಖರ್, ಮಹಿಳಾ ಘಟಕದ ಅಧ್ಯಕ್ಷೆ ಆಶಾಕುಮಾರ್, ಉಪಾಧ್ಯಕ್ಷೆ ಲತಾ, ವಕೀಲ ಬಿ.ಕೆ.ಚನ್ನಕೇಶವ ಮತ್ತಿತರರಿದ್ದರು.