ತುಮಕೂರು

ಮನೆಮನೆಗೆ ಬಿಜೆಪಿ ಜನಜಾಗರಣ ಅಭಿಯಾನ




ಚಿಕ್ಕನಾಯಕನಹಳ್ಳಿ: ನಾಲ್ಕು ಮುಕ್ಕಾಲು ವರ್ಷಗಳ ಬಿಜೆಪಿ ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸಲು, ಜಿಲ್ಲೆಯಲ್ಲಿ 25 ಸಾವಿರ ಕಾರ್ಯಕರ್ತರು ಮನೆಮನೆಗೆ ಬಿಜೆಪಿ ಜನಜಾಗರಣ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್.ಶಿಪ್ರಸಾದ್ ನುಡಿದರು.
ಅವರು ಮಂಗಳವಾರ ಚಿಕ್ಕನಾಯಕನಹಳ್ಳಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಜನವರಿ 20 ಪ್ರಾರಂಭವಾಗಿರುವ ಈ ಅಭಿಯಾನದಲ್ಲಿ ಇದುವರೆಗೆ 16 ಸಾವಿರ ಕಾರ್ಯಕರ್ತರು ಭಾಗವಹಿಸಿ ಪಕ್ಷದ ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಸಾಧನೆ ಮತ್ತು ಕೇಂದ್ರದ ಜನವಿರೋಧಿ ನೀತಿ ಮಾಹಿತಿಯ ಕರಪತ್ರಗಳನ್ನು ಮನೆಮನೆಗೆ ತಲುಪಿಸುವಲ್ಲಿ ನಮ್ಮ ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ ಎಂದರು.
ಗೊಂದಲಗಳ ನಡುವೆಯೂ ಈ ಪರಿ ಅಭಿವೃದ್ಧಿ ಬೇರೆ ಯಾವ ಸರ್ಕಾರಗಳು ಮಾಡುವುದು ಸಾಧ್ಯವಿಲ್ಲ. ಆದ್ದರಿಂದ ಗೊಂದಲ ನಿವಾರಣೆ ಮಾಡಿಕೊಳ್ಳಿ ಎಂಬುದು ಜನರ ಸಲಹೆಯಾಗಿದೆ ಎಂದರು. ಕಳೆದ ಚುನಾವಣೆಯಲ್ಲಿ ನಮ್ಮ ಪ್ರಣಾಳಿಕೆ ಪ್ರಕಾರ ಶೇ.80 ಭಾಗ ಈಡೇರಿಸಿದ್ದೇವೆ. ಇದು ನಮ್ಮ ಪಕ್ಷದ ಸರ್ಕಾರದ ಕೆಲಸದ ವೈಖರಿ. ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ, ಭರವಸೆಗಳನ್ನು ಅನುಷ್ಠಾನಗೊಳಿಸಿ ಜನರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿರುವುದು, ವಿರೋಧ ಪಕ್ಷಗಳನ್ನು ದಿಗ್ಬ್ರಮೆ ಗೊಳಿಸಿದೆ ಎಂದರು.
5 ರಥ ಯಾತ್ರೆ: ರಾಜ್ಯದಲ್ಲಿ ಪ್ರಮುಖ ನಾಯಕರ ನೇತೃತ್ವದಲ್ಲಿ 5 ರಥಯಾತ್ರೆಗಳು  ಹೋರಡಲಿದ್ದು, ರಥಯಾತ್ರೆ ಸಂದರ್ಭದಲ್ಲಿ ಕೇಂದ್ರದ ಆಡಳಿತದ ವೈಫಲ್ಯ, ರಾಜ್ಯ ಸರ್ಕಾರ ಅಭಿವೃದ್ಧಿಯನ್ನು ಜನತೆಗೆ ತಿಳಿಸಲಾಗುವುದು. ಈ ಸಂದರ್ಭದಲ್ಲಿ ಕೇಂದ್ರದ ನಾಯಕರಾದ ಎಲ್.ಕೆ. ಅಡ್ವಾಣಿ, ನರೇಂದ್ರ ಮೋದಿ, ಸುಷ್ಮಾಸ್ವರಾಜ್ ಮುಂತಾದ ನಾಯಕರು ಆಗಮಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ಎಸ್. ಕಿರಣ್‌ಕುಮಾರ್, ಕೆ.ವಿ. ಕವಿತಾ, ತಾಪಂ ಅಧ್ಯಕ್ಷ ಎಂ.ಎಂ. ಜಗದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಪ್ಪ ಮುಂತಾದವರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ಸರ್ಕಾರದಿಂದ ಉತ್ತರ ಕೇಳುವುದು ಅರಾಜಕತೆಯಲ್ಲ: ಜೈಲಿಗೂ ಹೋಗಲು ಸಿದ್ಧ; CJP ತಿರಂಗಾ ಮೆರವಣಿಗೆಗೂ ಮುನ್ನ ಅಭಿಜೀತ್ ದೀಪ್ಕೆ!

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು