ವರದಿಗಾರರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಲು ಒತ್ತಾಯ
ತಿಪಟೂರು: ಉಡುಪಿಯಲ್ಲಿ ವರದಿಗಾರರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಮುಖಂಡರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕನ್ನಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಆರ್. ವಿಜಯಕುಮಾರ್ ಮಾತನಾಡಿ ಭಾರತದಲ್ಲಿ ಪತ್ರಿಕಾರಂಗವು ಸಂವಿಧಾನದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೆಲ ಕಿಡಿಗೇಡಿಗಳು ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಹ ಹೀನಾಯ ಕೃತ್ಯ ಎಸಗುತ್ತಿದ್ದಾರೆ.
ಪರ್ತಕರ್ತರಿಗೆ ಭದ್ರತೆ ಇಲ್ಲದಂದಾಗಿದ್ದು, ಉಡುಪಿಯಲ್ಲಿ ಪತ್ರಿಕೆಯೊಂದರ ಜಿಲ್ಲಾ ವರದಿಗಾರರಾದ ಶ್ರೀಪತಿ ಹೆಗಡೆ ಹಕ್ಲಾಡಿ ಅವರ ಮೇಲೆ ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಂಡು ಪತ್ರಿಕಾ ಸ್ವಾತಂತ್ರ್ಯವನ್ನು ಕಾಪಾಡುವುದರ ಮೂಲಕ ಮಾಧ್ಯಮಕ್ಷೇತ್ರವದವರಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಬಿ.ಎಸ್.ಆರ್ ಕಾಂಗ್ರೆಸ್ ತಾ.ಅಧ್ಯಕ್ಷ ಎಲ್.ಪಿ.ಯದುನಂದನ, ದ.ಸಂ.ಸ ಅಧ್ಯಕ್ಷ ಹತ್ಯಾಳು ಮೂರ್ತಿ, ಬಿ.ಎಸ್.ಆರ್ ಎಸ್ಸಿ ಜಿಲ್ಲಾಧ್ಯಕ್ಷ ಟಿ.ಕೆ.ಮಂಜುನಾಥ್, ಕರವೇ ಸಂಚಾಲಕ ಗಿರೀಶ್, ಕಿರಣ್, ಶ್ರೀಧರ್, ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.