ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

Rashmi Kasaragodu
Updated On : 5 Feb 2013, 11:06 am




ತಿಪಟೂರು: ತಾಲೂಕಿನ ಹೊನ್ನವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹುತೇಕ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಿದ್ದು, ಮತ್ತೆ ರಾಜ್ಯ ಸರ್ಕಾರದಿಂದ ರೂ.35ಲಕ್ಷ ಬಿಡುಗಡೆ ಮಾಡಲಾಗಿದೆ.
 ಈ ಹಣವನ್ನು ಗ್ರಾಮದ ಶ್ರೀ ರೇವಣಸಿದ್ದೇಶ್ವರ ಮಠದ ಬೀದಿ, ಸಾಲುಮನೆ ರಸ್ತೆ, ಮಡಿವಾಳರ ಬೀದಿ, ಶ್ರೀರಾಮನಗರದ ಹಾಗೂ ಜನತಾಕಾಲೋನಿ ರಸ್ತೆಗಳ ಡಾಂಬರೀಕರಣ ಹಾಗೂ ಕಾಂಕ್ರಿಟ್ ರಸ್ತೆ ನಿರ್ಮಿಸಲಾಗುವುದು.  ಫೆಬ್ರವರಿಯೊಳಗೆ ಕಾಮಗಾರಿ ಸಂಪೂರ್ಣ ಮುಗಿಯಬೇಕೆಂದು ಗುತ್ತಿಗೆದಾರರಿಗೆ ಶಾಸಕ ಬಿ.ಸಿ.ನಾಗೇಶ್ ತಿಳಿಸಿದರು.
 ತಾಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಹೊನ್ನವಳ್ಳಿ-ಚೌಡೇನಹಳ್ಳಿ-ತಿಪ್ಪೇಪಾಳ್ಯ ರಸ್ತೆಗಳಿಗೆ ರು. 28ಲಕ್ಷ, ಹೊನ್ನವಳ್ಳಿ-ಮಡಿವಾಳರಬೀದಿ-ಶೀರಾಮನಗರ ರಸ್ತೆಗಳಿಗೆ ರು. 35ಲಕ್ಷಕ್ಕೆ ಪ್ರಸ್ಥಾವನೆ ಸಲ್ಲಿಸಿದ್ದು, ಈ ತಿಂಗಳೊಳಗೆ ಕಾಮಗಾರಿ ಪ್ರಾರಂಭವಾಗಲಿದೆ. ಹೊನ್ನವಳ್ಳಿ ಗ್ರಾ.ಪಂ. ವ್ಯಾಪ್ತಿ 9 ದೇವಾಲಯಗಳ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿದ್ದು, ಸಂಬಂಧಪಟ್ಟವರು ಹಣ ತೆಗೆದುಕೊಳ್ಳುವಂತೆ ಮನವಿ ಮಾಡಿದರು. ಅಭಿವೃದ್ಧಿ ಹರಿಯುವ ನೀರಿನಂತೆ ಇಂತಹ ಕಾರ್ಯಗಳಿಗೆ ನಿಮ್ಮ ಸಹಕಾರ ಅಗತ್ಯ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರಾಜಣ್ಣ, ಕುರುಬರ ಮಂಡಲಿ ಅಧ್ಯಕ್ಷ ಹುಚ್ಚೇಗೌಡ, ಉಪಾಧ್ಯಕ್ಷ ಹಲ್ಕೂರಪ್ಪ, ಮುಪ್ಪನಯ್ಯ, ಗ್ರಾ.ಪಂ.ಸದಸ್ಯರಾದ ಶ್ರೀಕಂಠಮೂರ್ತಿ, ಟಿ.ನರಸಿಂಹಮೂರ್ತಿ, ಎಚ್.ಎಂ.ಕೃಷ್ಣಮೂರ್ತಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement