ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

'ಕೌಶಲ್ಯ ತರಬೇತಿಗೆ ಸಹಯೋಗ ಕಾರ್ಯಕ್ರಮ ಪೂರಕ'

Mainashree
Updated On : 8 Feb 2013, 12:49 pm

ಹುಳಿಯಾರು:  ಕರ್ನಾಟಕ ಸರ್ಕಾರ, ಕಾಲೇಜು ಶಿಕ್ಷಣ ಇಲಾಖೆ ಮತ್ತು ಲಾರಸ್ ಎಜುಟೆಕ್ ಪ್ರೈ. ಲಿ. ಅವರ ಸಹಯೋಗದಲ್ಲಿ ಹುಳಿಯಾರು-ಕೆಂಕೆರೆ ಬಿಎಮ್ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸಹಯೋಗ ಕಾರ್ಯಕ್ರಮವನ್ನು ಪ್ರಾಚಾರ್ಯ ಆರ್.ಮೂಗೇಶಪ್ಪ ಬುಧವಾರ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಅಂತಿಮ ವರ್ಷದ ಬಿ.ಎ., ಬಿ.ಕಾಂ. ಮತ್ತು ಬಿ.ಬಿ.ಎಂ. ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿರುವ ಸಹಯೋಗ ಕಾರ್ಯಕ್ರಮದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಬೇಕಾದ ಕೌಶಲ್ಯ ತರಬೇತಿ ಅವಶ್ಯಕವಾಗಿದ್ದು ಸಹಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪಯೋಗಪಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾಲೇಜಿನ ಸಂಚಾಲಕರಾದ ಸೈಯದ್ ಇಬ್ರಾಹಿಂ ಸಾಬ್ ಸಂವಹನ ಕೌಶಲ್ಯ ಮತ್ತು ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಲಾರೆಸ್ ಎಜುಟೆಕ್ ಪ್ರೈ.ಲಿ. ಸಂಸ್ಥೆ ಸಂಯೋಜಕ ಬಿ.ಇ. ಮಲ್ಲಯ್ಯ ಸಹಯೋಗ ಕಾರ್ಯಕ್ರಮದ ರೂಪುರೇಷೆಯ ಬಗೆಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಸಂಯೋಜಕರಾದ ವೀರೇಶ್ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement