ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ನೀರಿನ ಬವಣೆಗೆ ಮುನ್ನೆಚ್ಚರಿಕೆ ಕ್ರಮ ಜರುಗಿಸಿ: ಆಗ್ರಹ

Mainashree
Updated On : 9 Feb 2013, 11:21 am

ಮಧುಗಿರಿ:  ಬೇಸಿಗೆ ಪ್ರಾರಂಭಕ್ಕೂ ಮುನ್ನವೇ ತಾಲೂಕಿನಲ್ಲಿ ಬಿರು ಬಿಸಿಲು ಜೋರಾಗಿದೆ. ಕುಡಿವ ನೀರಿನ ಸಮಸ್ಯೆ ತಾರಕಕ್ಕೇರುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದೆ. ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಯವರು ತಮ್ಮ ವ್ಯಾಪ್ತಿಯಲ್ಲಿ ನೀರಿನ ಬವಣೆ ನೀಗಿಸಲು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈಗಾಗಲೇ ತಾಲೂಕಿನ ಸಾಕಷ್ಟು ಭಾಗಗಳಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೋರಿದೆ.ದೂರಿದ್ದು ಅಲ್ಲಲ್ಲಿ  ಕುಡಿವ ನೀರಿಗೆ ಜನತೆ ಪರದಾಡುವ ದೃಶ್ಯ ಕಂಡು ಬರುತ್ತಿದೆ.ಇದಕ್ಕೆ ಪೂರಕ ಎಂಬಂತೆ ಮಧುಗಿರಿ ಕಸಬಾ ಚಿನಕವಜ್ರ ಗ್ರಾಪಂ ವ್ಯಾಪ್ತಿಯಲ್ಲಿ ಸಮರ್ಪಕ ಕುಡಿವ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ಗ್ರಾಮದ ಮಹಿಳೆಯರು ಚಿನಕವಜ್ರ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಖಾಲಿ ಕೊಡ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಮಧುಗಿರಿ ಕಸಬಾ ಚಿನಕವಜ್ರ ಗ್ರಾಮದಲ್ಲಿ ಕೆಲ ದಿನಗಳಿಂದ ಸಮರ್ಪಕ ಕುಡಿವ ನೀರು ಸರಬರಾಜು ಮಾಡದೇ ಅಧಿಕಾರಿಗಳು ಕೈ ಚೆಲ್ಲಿದ್ದಾರೆ. ಮಕ್ಕಳು, ರೋಗಿಗಳು, ವಯೋವೃದ್ಧರುಶುದ್ಧ ಕುಡಿವ ನೀರಿಲ್ಲದೆ ಬಿಂದಿಗೆ ಹಿಡಿದು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಕಷ್ಟು ಸಲ ಪಂಚಾಯಿತಿ ಅಧಿಕಾರಿಗಳಿಗೆ ನೀರಿನ ಸಮಸ್ಯೆ ಬಗ್ಗೆ ಗಮನಕ್ಕೆ ತಂದರೂ ಕೂಡ ಪ್ರಯೋಜನವಾಗಿಲ್ಲ. ಸಮರ್ಪಕ ನೀರು ಸರಬರಾಜು ಮಾಡುವಂತೆ ಗ್ರಾಮದ ಮುಖಂಡ ಸಿದ್ದಲಿಂಗಪ್ಪ, ಲಕ್ಕಪ್ಪ, ನಾಗಮ್ಮ, ಸರಸ್ಪತಿ, ಗೌರಮ್ಮ ಹುಚ್ಚೇಗೌಡ ಸೇರಿದಂತೆ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement