ಕೊರಮ ಕೊರಚರಿಗೆ ರಾಜಕೀಯ ಸ್ಥಾನಮಾನ ನೀಡಿ: ಸಿ. ನಂಜಪ್ಪ
ತುಮಕೂರು: ಕೊರಮ ಕೊರಚ ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ನೀಡುವ ಹಿನ್ನೆಲೆಯಲ್ಲಿ ಅವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕೆಂದು ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.
ನಗರದ ಗುರು ವುಡ್ಲ್ಯಾಂಡ್ ಹೊಟೇಲ್ನಲ್ಲಿ ನಡೆದ ಕೊರಮ ಸಮುದಾಯದ ಸಮಾವೇಶನ್ನು ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ರಾಜ್ಯ ಕಾರ್ಯದರ್ಶಿ ಹಾಗೂ ಹಿರಿಯ ಮುಖಂಡ ಕಡೂರು ಸಿ. ನಂಜಪ್ಪ ಉದ್ಘಾಟಿಸಿ ಮಾತನಾಡಿದರು.
ರಾಜಕೀಯ ಸ್ಥಾನಮಾನ ಕುರಿತು ಸಾಮುದಾಯ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎಲ್ಲಾ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ನಮ್ಮ ಸಮುದಾಯಕ್ಕೆ 5 ಮೀಸಲು ಕ್ಷೇತ್ರದಲ್ಲಿ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಸಭೆಯಲ್ಲಿಪ್ರಧಾನ ಕಾರ್ಯದರ್ಶಿ ಪ್ರಭು, ಹೋರಾಟಗಾರ ಸಿದ್ದಗಂಗಯ್ಯ, ತಾಲೂಕು ಅಧ್ಯಕ್ಷ ಶಿವಶಂಕರ್, ಸಂಘಟನಾ ಕಾರ್ಯದರ್ಶಿ ನಾರಾಯಣಪ್ಪ, ತುಮಕೂರು ಸಂಘಟನಾ ಕಾರ್ಯದರ್ಶಿ ನಾಗಭೂಷಣ್ ಉಪಸ್ಥಿತರಿದ್ದರು.