ನಾಳೆ ಅಂತರ ಕಾಲೇಜು ರಸಪ್ರಶ್ನೆ ಕಾರ್ಯಕ್ರಮ
ತಿಪಟೂರು: ನಗರದ ಕಲ್ಪತರು ಪ್ರಥಮ ದರ್ಜೆ ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿ ಬೆಂಗಳೂರು ವತಿಯಿಂದ ಮಾರ್ಚ್ 8ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಫೆ.12ರ ಮಂಗಳವಾರ ತುಮಕೂರು ವಿಶ್ವವಿದ್ಯಾಲಯದ ಮಟ್ಟದ ಅಂತರ ಕಾಲೇಜು ರಸಪ್ರಶ್ನೆ, ಪ್ರಬಂಧ, ಚಿತ್ರಕಲೆ ಹಾಗೂ ವಿಜ್ಞಾನ ಉಪನ್ಯಾಸ, ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಪ್ರಾಂಶುಪಾಲ ಎನ್. ಪರಮೇಶ್ವರಪ್ಪ ತಿಳಿಸಿದ್ದಾರೆ.