ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಬಿಜೆಪಿ ಸರ್ಕಾರ ಜನಪರ ಕೆಲಸ ಮಾಡುತ್ತಿದೆ: ಭೈರಪ್ಪ

Rashmi Kasaragodu
Updated On : 10 Feb 2013, 11:26 am

ಗುಬ್ಬಿ: ರಾಜ್ಯದ ಬಿಜೆಪಿ ಸರ್ಕಾರ ಜನಪರವಾದ ಕೆಲಸಗಳನ್ನು ಮಾಡುತ್ತಿದ್ದು ಮುಖ್ಯ ಮಂತ್ರಿ ಜಗದೀಶ್ ಶೆಟ್ಟರ್ ಉತ್ತಮವಾದ ಜನಪರ ಬಜೆಟ್ ಮಂಡಿಸಿದ್ದಾರೆಂದು ಜಿಲ್ಲಾ  ಬಿಜೆಪಿ ಉಪಾಧ್ಯಕ್ಷ ಎಚ್.ಟಿ. ಭೈರಪ್ಪ  ಹಾಗೂ ತಾಲೂಕು ಬಿಜೆಪಿ ಅಧ್ಯಕ್ಷ ಸಾಗರನಹಳ್ಳಿ ವಿಜಯ ಕುಮಾರ್ ತಿಳಿಸಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೃಷಿ, ಗ್ರಾಮೀಣಾಭಿವೃದ್ಧಿಗೆ ಪ್ರಸಕ್ತ ಬಜೆಟ್ನಲ್ಲಿ ವಿಶೇಷ ಅನುದಾನ ನೀಡಿದ್ದು ಕುಡಿಯುವ ನೀರು, ಬಡಜನರ ಕಲ್ಯಾಣಕ್ಕಾಗಿ ವಿನೂತನ ಯೋಜನೆಗಳನ್ನು ಜಾರಿಗೊಳಿಸಿರುವುದು ಅಭಿನಂದನಾರ್ಹ ಎಂದರು. ಬಿಜೆಪಿ ಸರ್ಕಾರ ಕೃಷಿಗಾಗಿ ವಿಶೇಷ ಬಜೆಟ್ ಮಂಡಿಸಿ ಆ ಮೂಲಕ ರಾಜ್ಯದ ರೈತರಿಗೆ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಪ್ರೋತ್ಸಾಹ  ನೀಡಿರುವುದಾಗಿ ತಿಳಿಸಿದರು. ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ 2966 ಕೋಟಿ ರು, ಕಡು ಬಡವರಿಗೆ 2 ರು.ಗೆ ಕೆಜಿ ಅಕ್ಕಿ, ಗ್ರಾವೀಣ ಜನರ ಅಭ್ಯುದಯಕ್ಕೆ ಗ್ರಾವೀಣ ಪ್ರದೇಶಗಳಲ್ಲಿ ನಾಡ ಕಚೇರಿ ಪ್ರಾರಂಭ, ಕುಡಿಯುವ ನೀರಿಗೆ ವಿಶೇಷ ಅನುದಾನ, ರೈತರಿಗೆ ಉಚಿತ ವಿದ್ಯುತ್ ಮುಂದುವರಿಕೆ, ಸಹಕಾರ ಸಂಘಗಳ ರೈತರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ, ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಸೇರಿದಂತೆ 10 ಹಲವು ಮಹತ್ವ ಪೂರ್ಣ ಯೋಜನೆಗಳನ್ನು ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಜಾರಿಗೊಳಿಸಿದೆ ಎಂದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಂಚಾಕ್ಷರಯ್ಯ ಮಾತನಾಡಿ ದೂರದೃಷ್ಟಿತ್ವ ಹೊಂದಿರುವ ರಾಜ್ಯದ ಬಿಜೆಪಿ ಸರ್ಕಾರ ಶಿಕ್ಷಣ,  ಮಹತ್ವದ ಯೋಜನೆಗಳಿಗೆ ಬಜೆಟ್ನಲ್ಲಿ ವಿಶೇಷ ಅನುದಾನ ನೀಡಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement