ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಇಂದು ವೇತನ ತಾರತಮ್ಯ ನಿವಾರಣೆಗೆ ಧರಣಿ ಸತ್ಯಾಗ್ರಹ

Rashmi Kasaragodu
Updated On : 12 Feb 2013, 11:52 am

ತಿಪಟೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಮೂಲ ವೇತನವು ಕೇಂದ್ರ ಹಾಗೂ ಇನ್ನಿತರೆ ರಾಜ್ಯಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇದೆ. ಈ ತಾರತಮ್ಯವನ್ನು ಆಯ-ವ್ಯಯ ಮಂಡನೆ ಸಂದರ್ಭದಲ್ಲಿ ಪ್ರಸ್ತಾಪ ಮಾಡದಿರುವುದು ಶಿಕ್ಷಕರಿಗೆ ತೀವ್ರ ನಿರಾಶೆಯುಂಟುಮಾಡಿದ್ದು, ಈ ಬಗ್ಗೆ ಸರ್ಕಾರ ಗಮನ ಸೆಳೆಯಲು ಬುಧವಾರ ಬೆಳಗ್ಗೆ 10.30ರಿಂದ ಸಂಜೆ 5ಗಂಟೆಯವರೆಗೆ ತಾಲೂಕು ಹಾಗೂ ಜಿಲ್ಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಜಿ.ಆರ್. ಜಯರಾಂ ಹಾಗೂ ಜಿಲ್ಲಾಧ್ಯಕ್ಷ ಆರ್.ಪರಮಶಿವಮೂರ್ತಿ ಮತ್ತು ಜಿಲ್ಲಾ ಪ್ರ.ಕಾರ್ಯದರ್ಶಿ ಎನ್.ಗೋಪಾಲಕೃಷ್ಣ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಾದರಿಯಲ್ಲಿ ಮನೆ ಬಾಡಿಗೆ, ನಗರಭತ್ಯೆ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು ಇದರ ಬಗ್ಗೆ ಸರ್ಕಾರ ಪರಿಗಣಿಸಿರುವುದಿಲ್ಲ. ಇದರಿಂದ 5ಲಕ್ಷ ಶಿಕ್ಷಕ ನೌಕರರನ್ನು ಸರ್ಕಾರ ಕಡೆಗಣಿಸಿದಂತಾಗಿದೆ. ಈ ವರ್ಷದ ಆಯ-ವ್ಯಯ ಮಂಡನೆಯಲ್ಲಿ ಬೆಂಗಳೂರು ನಗರಕ್ಕೆ ಶೇ.25ರಿಂದ 30 ಕ್ಕೆ ಮನೆ ಬಾಡಿಗೆ ಹೆಚ್ಚಿಸಲಾಗಿದೆ ಎಂದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement