ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಚುನಾವಣೆಗೆ ಜೆಡಿಎಸ್ ಸಿದ್ಧ: ಎಚ್‌ಡಿಕೆ

Rashmi Kasaragodu
Updated On : 15 Feb 2013, 12:17 pm

ತುಮಕೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದರು.
ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವುದು ಸ್ವಾಗತಾರ್ಹ. ತಾವು ಈಗಾಗಲೇ ಕಳೆದ 6 ತಿಂಗಳಿಂದ ರಾಜ್ಯ ಪ್ರವಾಸ ಮಾಡುತ್ತಲೇ ಬಂದಿದ್ದೇನೆ. ಬಿಜೆಪಿ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದರೂ, ರಾಜ್ಯಪಾಲರು ಅಂಕಿತ ಹಾಕಲು ಒಪ್ಪಲಿಲ್ಲ. ಜತೆಗೆ ನ್ಯಾಯಾಲಯದ ಆದೇಶ, ಚುನಾವಣಾ ಆಯೋಗದ ತೀರ್ಮಾನವನ್ನು ಪ್ರಶ್ನೆ ಮಾಡಬಾರದು.
 ರಾಜಕೀಯ ಪಕ್ಷಗಳು ಚುನಾವಣೆ ಕಡೆ ಗಮನ ನೀಡಬೇಕು ಅನ್ನೋದು ತಮ್ಮ ಅಭಿಪ್ರಾಯ ಎಂದರು.
ಮಾನದಂಡವಲ್ಲ: ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಅಂತಿಮ ತೀರ್ಪಲ್ಲ. ಮುಂದಿನ 3 ತಿಂಗಳ ಅವಧಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮಾನದಂಡವಲ್ಲ. ಹಿಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಗೆದ್ದ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಸೋತ ಉದಾಹರಣೆಗಳಿವೆ ಎಂಬುದನ್ನು ಮರೆಯಬಾರದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement