ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಬಿಎಸ್‌ಆರ್ ಕಾಂಗ್ರೆಸ್ ಮಹಿಳೆಯರಿಗೆ ಅವಕಾಶ ಕಲ್ಪಿಸಲಿ

Parashurama
Updated On : 17 Feb 2013, 12:40 pm

ಪಾವಗಡ: ವಿಧಾನ ಸಭೆ ಚುನಾವಣೆಯಲ್ಲಿ ತಾಲೂಕು ಬಿಎಸ್‌ಆರ್ ಕಾಂಗ್ರೆಸ್ ಮಹಿಳೆಯರಿಗೆ ಅವಕಾಶ ಕಲ್ಪಿಸುವಂತೆ ಇಲ್ಲಿನ ಅನೇಕ ಮಹಿಳಾ ಸಂಘಟನೆಗಳು ಒತ್ತಾಯಿಸಿವೆ.
ಪಟ್ಟಣದ ಪ್ರವಾಸಿ ಮಂದಿರದ ಬಳಿ ಶುಕ್ರವಾರ ಸುದ್ದಿಗಾರರನ್ನು ಭೇಟಿ ಮಾಡಿದ ಮಹಿಳಾ ಸಂಘಟನೆಗಳ ಅನೇಕ ಪದಾಧಿಕಾರಿಗಳು ಈ ಭಾರಿ ನಡೆಯುವ ವಿಧಾನ ಸಭೆ ಚುನಾವಣೆಯಲ್ಲಿ ಬಿಎಸ್‌ಆರ್ ಪಕ್ಷದಿಂದ ಮಹಿಳೆಯರಿಗೆ ಅವಕಾಶ ಕಲ್ಪಿಸಬೇಕೆಂದು ಪಕ್ಷದ ರಾಜ್ಯಾಧ್ಯಕ್ಷ ಬಿ. ಶ್ರೀರಾಮುಲು ಹಾಗೂ ಹಿರಿಯ ಮುಖಂಡರಾದ ಜನಾರ್ದನರೆಡ್ಡಿ ಹಾಗೂ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸೋಮಶೇಖರ್‌ರೆಡ್ಡಿ,  ಅಧ್ಯಕ್ಷ ಡಾ. ಓಂಕಾರನಾಯಕ ನೇತೃತದ ಸಮಿತಿಗೆ ಒತ್ತಾಯಪಡಿಸಿದರು.
ಇದೇ ಸಂದರ್ಭದಲ್ಲಿ ಸಂಘಗಳ ನೇತೃತ್ವ ವಹಿಸಿ ಮಾತನಾಡಿದ ಮಂಜುಳ, ಅನ್ನಪೂರ್ಣ, ಮಹದೇವಮ್ಮ ಮುಂತಾದವರು ಮಹಿಳೆಯರಿಗೆ ಪ್ರಾತಿನಿಧ್ಯ ಕಲ್ಪಿಸುವ ಹಿನ್ನೆಲೆಯಲ್ಲಿ ಅದರಲ್ಲೂ ಈಗಾಗಲೇ ಪಕ್ಷದಲ್ಲಿ ಗುರುತಿಸಿಕೊಂಡು ಪಕ್ಷದ ಮಹಿಳಾ ಘಟಕದ ತಾ.ಅಧ್ಯಕ್ಷರಾದ ಮಾಜಿ ಶಾಸಕ ನಾಗಪ್ಪ ಅವರ ಪತ್ನಿ ನಾಗರತ್ನಮ್ಮ ಅವರನ್ನು ಪರಿಗಣಿಸಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು.
ಕಳೆದ 30 ವರ್ಷಗಳಿಂದ ತಾಲೂಕು ಕಾಂಗ್ರೆಸ್‌ನಲ್ಲಿ ಸೇವೆ ಮಾಡಿ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ನಾಗರತ್ನಮ ಕಾಂಗ್ರೆಸ್‌ನಲ್ಲಿ ಮಹಿಳೆಯರನ್ನು ಕಡೆಗಣಿಸಿದ ಕಾರಣ ಕಾಂಗ್ರೆಸ್ ತೊರೆದು ಬಿಎಸ್‌ಆರ್‌ಗೆ ಬಂದ ಮೇಲೆ ತಾಲೂಕಿನಾದ್ಯಂತ ಸ್ವಸಹಾಯ ಸಂಘಗಳು, ಸ್ತ್ರೀ ಶಕ್ತಿ ಸಂಘಗಳು ಸೇರಿದಂತೆ ಮಹಿಳೆಯರ ಪಡೆಯನ್ನು ಕಟ್ಟಿ  ಸಂಘಟಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷೆ ನಾಗರತ್ನಮ್ಮ ಕಳೆದ 30 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ  ಸೇವೆ ಮಾಡಿದ ನಾನು ಬಡವ ದೀನ ದಲಿತರ ಪರ ಕೆಲಸ ಮಾಡಿದ್ದು ಆ ಪಕ್ಷದಲ್ಲಿ ಮಹಿಳೆಯರಿಗೆ ಸ್ಥಾನಮಾನವಿಲ್ಲದ ಕಾರಣ ಶ್ರೀರಾಮುಲು ನೇತ್ರತ್ವದ ಬಿಎಸ್‌ಆರ್ ಪಕ್ಷಕ್ಕೆ ಸೇರಿದೆ.  ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಮೂಲಕ ಅವಕಾಶ ಕಲ್ಪಿಸಿದರೆ ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement