ಡಿಕ್ಕಿ: ಬೈಕ್ ಸವಾರ ಸಾವು
ಶಿರಾ: ತಾಲೂಕಿನ ಕಡವಿಗೆರೆಯ ರಾ.ಹೆ.4 ರಲ್ಲಿ ವೇಗವಾಗಿ ಚಲಿಸುತ್ತಿದ್ದ ಯಮಹಾ ಬೈಕ್ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಲೋಹಿತ್ ಅವರ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಬೈಕ್ ಹಿಂದೆ ಕುಳಿತಿದ್ದ ಬೆಂಗಳೂರು ವಾಸಿ ಪ್ರದೀಪ್ ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರದೀಪ್ ಅವರು ತಮ್ಮ ಚಿಕ್ಕಪ್ಪ ಲೋಹಿತ್ ಅವರೊಡನೆ ತೆರಳುವಾಗ ಈ ದುರಂತ ಸಂಭವಿಸಿದೆ. ಈ ಬಗ್ಗೆ ಕಳ್ಳಂಬೆಳ್ಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.