ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸರ್ಕಾರಿ ಶಾಲೆಗೇ ಮಕ್ಕಳನ್ನು ಸೇರಿಸಿ: ಜಿ.ಪಂ.ಸದಸ್ಯೆ ಮಂಜುಳಾ

Parashurama
Updated On : 17 Feb 2013, 11:46 am

ಹುಳಿಯಾರು: ಖಾಸಗಿ ಶಾಲೆಗಳಿಗಿಂತಲೂ ಉತ್ತಮವಾದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಹೆಚ್ಚಾಗಿ ಸೇರಿಸುವಂತೆ ಜಿ.ಪಂ.ಸದಸ್ಯೆ ಮಂಜುಳಾ ತಿಳಿಸಿದರು.
ಹುಳಿಯಾರಿನ ಸರ್ಕಾರಿ ಉರ್ದು ಪ್ರಾಥಮಿಕ ಪಾಠಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿದ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಅನೇಕ ಪೋಷಕರು ಖಾಸಗಿ ಶಾಲೆಗಳಲ್ಲಿನ  ಆಡಂಬರಕ್ಕೆ ಮಾರುಹೋಗಿ ತಮ್ಮ ಮಕ್ಕಳನ್ನು ಶಾಲೆಗಳಿಗೆ ಸೇರಿಸುತ್ತಾ, ಸರ್ಕಾರಿ ಶಾಲೆಗಳನ್ನು ಮರೆಯುತ್ತಿದ್ದಾರೆ. ಇದು ವಿಷಾದನೀಯ ಎಂದರು.  ಪ್ರಸ್ತುತದಲ್ಲಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನವನ್ನು ನೀಡುವ ಮೂಲಕ ಹೆಚ್ಚಿನ ಬೋಧನೋಪಕರಣ,ಬಿಸಿ ಊಟ, ಸೈಕಲ್ ವಿತರಣೆ, ಸಮವಸ್ತ್ರ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಮುಂದಾಗಿವೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಮನವಿ ಮಾಡಿದರು.
ಶಿಕ್ಷಕರ ಜವಾಬ್ದಾರಿ: ತಾ.ಪಂ.ಮಾಜಿ ಉಪಾಧ್ಯಕ್ಷೆ ಬೀಬೀಫಾತೀಮ ಮಾತನಾಡಿ, ಶಿಕ್ಷಕರು ಮಕ್ಕಳ ಕಲಿಕಾ ಸಮಯದಲ್ಲಿ ಶಾಲೆಯಲ್ಲಿ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಬಿಂಬಿಸುವಂತಹ ವಿಚಾರಗಳನ್ನು ತಿಳಿಸುವಲ್ಲಿ ಮುಂದಾಗಬೇಕಿದೆ ಎಂದರು. ದೇಶಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಜವಬ್ದಾರಿ ಶಿಕ್ಷರದ್ದೇ ಆಗಿದೆ ಎಂದರು.  ಪ್ರಾಥಮಿಕ ಶಾಲಾ ಸಂಘದ ಸಂಘಟನಾ ಕಾರ್ಯದರ್ಶಿ ಸುರೇಶ್ ಕುಮಾರ್, ಗ್ರಾ.ಪಂ.ಅಧ್ಯಕ್ಷೆ ಪುಟ್ಟಿಬಾಯಿ, ಉಪಾಧ್ಯಕ್ಷೆ ಅಬುದ್ದುನೀಸಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement