'ಶಿವಾಜಿ ಮತಾಂತರ ವಿರೋಧಿ ಮಹಾರಾಜ'
ಹುಳಿಯಾರು: ಸ್ವಾತಂತ್ರ್ಯ ಪೂರ್ವದಲ್ಲಿ ಮತಾಂತರಕ್ಕೆ ಹಿಂದೂ ಜನರನ್ನು ಪೀಡಿಸುತ್ತಿದ್ದ ಸಂದರ್ಭದಲ್ಲಿ ಮತಾಂತರವನ್ನು ವಿರೋಧಿಸಿ, ಹಿಂದುಗಳಿಗೆ ರಕ್ಷಣೆ ನೀಡುವಲ್ಲಿ ಮುಂದಾದ ಧೀಮಂತ ನಾಯಕ ಛತ್ರಪತಿ ಶಿವಾಜಿ ಎಂದು ನಿವೃತ್ತ ಶಿಕ್ಷಕ ಶ್ರೀನಿವಾಸಮೂರ್ತಿ ತಿಳಿಸಿದರು.
ಹುಳಿಯಾರು ಹೋಬಳಿ ವಳಗೆರೆಹಳ್ಳಿಯಲ್ಲಿ ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ಹಾಗೂ ರೋಟರಿ ಕ್ಲಬ್ವತಿಯಿಂದ ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.
ಇಂದಿನ ಪೋಷಕರು ತಮ್ಮ ಮಕ್ಕಳಿಗೆ ದೇಶಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಗಳ ಜೀವನ ಚಿತ್ರಣಗಳನ್ನು ತಿಳಿಸಬೇಕು ಎಂದರು.
ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಗಂಗಾಧರ್, ರೋಟರಿ ಸಂಸ್ಥೆ ಅಧ್ಯಕ್ಷ ರವೀಶ್, ಹುಳಿಯಾರು ಗ್ರಾ.ಪಂ.ಅಧ್ಯಕ್ಷೆ ಪುಟ್ಟಿಬಾಯಿ, ಗುಡಿಗೌಡ ನರಸಿಂಹರಾವ್, ನಾಗೇಶ್, ಶಂಕರ್,ಪಾಂಡೋಜಿರಾವ್, ಹನುಂತರಾವ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.