ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಬೇಗನ್ ಸೇವೆ ಪಾಲಿಸಿ: ರಾಜೇಶ್

Parashurama
Updated On : 24 Feb 2013, 11:23 am

ತಿಪಟೂರು: ದೇಶದ ಹಿತದೃಷ್ಟಿಯಿಂದ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳುವುದರಿಂದ ವ್ಯಕ್ತಿತ್ವ ವಿಕಾಸವಾಗುತ್ತದೆ ಎಂದು ಶಿವಮೊಗ್ಗದ ಮಲ್ನಾಡ್ ಓಪನ್ ಸ್ಕೌಟ್ ಗ್ರೂಪ್ ನಾಯಕರಾದ ಎ.ವಿ. ರಾಜೇಶ್ ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಘಟಕದ ವತಿಯಿಂದ ಹಮ್ಮಿಕೊಂಡಿದ್ದ  ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಲಾರ್ಡ್ ಬೇಗನ್‌ರ 155ನೇ ಜನ್ಮ ದಿನದ ಅಂಗವಾಗಿ ಸಂಸ್ಥಾಪಕರ ಚಿಂತನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಲಾರ್ಡ್ ಬೇಗನ್‌ರ ಜೀವನಾದರ್ಶಗಳನ್ನು ಮತ್ತು ಅವರ ಹೋರಾಟದ ದಿನಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರಲ್ಲದೆ ಇವರ ನಿಸ್ವಾರ್ಥ ಸಾಮಾಜಿಕ ಸೇವೆಯನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಪ್ರಾಂಶುಪಾಲ ಡಾ. ಜಯದೇವಪ್ಪ ಮಾತನಾಡಿ ಸಂಕುಚಿತ ಮನೋಭಾವ ಬಿಟ್ಟು ಯಾವಾಗಲೂ ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು. ಕಷ್ಟದಲ್ಲಿ ಬದುಕಿದರೆ ಜೀವನ ಎಂಬ ಪರೀಕ್ಷೆಯು ಸುಲಭವಾಗುತ್ತದೆ. ದೇಹ ಮತ್ತು ಮನಸ್ಸನ್ನು ಬೆಸೆಯುವ ಕೆಲಸ ಇಂತಹ ಕಾರ್ಯಕ್ರಮಗಳು ಅವಶ್ಯಕವಾಗಿವೆ. ಇಂದಿನ ಪೀಳಿಗೆಯಲ್ಲಿ ಸಾಮಾಜಿಕ ಸೇವೆ ಮಾಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಸ್ಕೌಟ್ ಮತ್ತು ಗೈಡ್ಸ್‌ನ ಸಂಯೋಜನಾಧಿಕಾರಿ ಡಾ. ನಾಗೇಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿ ಯುವಕರು ಶಿಸ್ತನ್ನು ತುಂಬುವ ನಿಟ್ಟಿನಲ್ಲಿ ಸ್ಕೌಟ್ ಮತ್ತು ಗೈಡ್ಸ್‌ನ ಪಾತ್ರ ಪ್ರಮುಖವಾಗಿದೆ. ಯುವಕರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ದಿವಂಗತ ಆಚಾರ್ಯ ಅವರು ಈ ಕಾರ್ಯಕ್ರಮವನ್ನು ಜಾರಿಗೊಳಿಸಿದರು. ಗ್ರಾಮೀಣ ಅಭಿವೃದ್ಧಿಯ ದೃಷ್ಟಿಯಿಂದ ಉತ್ತಮ ಕೆಲಸ ಕಾರ್ಯಗಳಿಗೆ ನೆರವಾಗಬೇಕೆಂಬುದು ಇವರ ಆಶಯವಾಗಿತ್ತು ಎಂದರು.
ಕಾರ್ಯಕ್ರಮದಲ್ಲಿ ಪ್ರೊ.ರಾಮಚಂದ್ರ, ದೈಹಿಕ ಶಿಕ್ಷಣ ನಿರ್ದೇಶಕ ಮನೋಜ್ ಕುಮಾರ್, ಪತ್ರಾಂಕಿತ ವ್ಯವಸ್ಥಾಪಕಿ ರಂಗಲಕ್ಷ್ಮಿ, ಡಾ. ಸರಸ್ವತಿ, ಡಾ. ವೆಂಕಟೇಶ್, ಪ್ರೊ.ನರಸಿಂಹರಾಜು ಮತ್ತಿತರರಿದ್ದರು.
ಸಹಾಯಕ ಪ್ರಾಧ್ಯಾಪಕಿ ವಿಜಯಲಕ್ಷ್ಮಿ ಸ್ವಾಗತಿಸಿ, ಡಾ. ನಾಗೇಂದ್ರಪ್ಪ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement