ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಇಂದಿನಿಂದ ಕೃಷಿ ವಸ್ತು ಪ್ರದರ್ಶನ

Parashurama
Updated On : 28 Feb 2013, 12:12 pm

ತುಮಕೂರು: ಇದೇ ತಿಂಗಳ 28 ರಿಂದ ಮಾ.14 ರವರೆಗೆ ಸಿದ್ದಗಂಗೆಯಲ್ಲಿ ಕೃಷಿ ಹಾಗೂ ವಸ್ತು ಪ್ರದರ್ಶನ ನಡೆಯಲಿದೆ. ಗುರುವಾರ ಸಂಜೆ 6-30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣ ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ. ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್‌ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಅಧ್ಯಕ್ಷೆ ಪ್ರೇಮಾ ಮಹಾಲಿಂಗಪ್ಪ, ಜಿಲ್ಲಾಧಿಕಾರಿ ಆರ್.ಕೆ.ರಾಜು, ಜಿಪಂ ಸಿಇಒ ಗೋವಿಂದರಾಜು ಜಿಪಂ ಸದಸ್ಯೆ ರಾಧಾ ಗೋವಿಂದರಾಜು, ತಾಪಂ ಸದಸ್ಯ ಎಂ.ಬಿ. ಕುಮಾರ್ ಪಾಲ್ಗೊಳ್ಳಲ್ಲಿದ್ದಾರೆ.
ಸಿದ್ದಗಂಗಾ ಮಠಾಧೀಶ ಡಾ.ಶಿವಕುಮಾರಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದು, ಕಿರಿಯಶ್ರೀ ಸಿದ್ದಲಿಂಗಸ್ವಾಮೀಜಿ ಉಪಸ್ಥಿತರಿರುವರು.
ವಿವೇಕಾನಂದ
ವೇದಿಕೆ ಸ್ತಿತ್ವಕ್ಕೆ
ತುಮಕೂರು: ಕವಿತಾಕೃಷ್ಣ ಸಾಹಿತ್ಯ ಮಂದಿರದ ವತಿಯಿಂದ ವಿವೇಕಾನಂದ ಯುವ ವೇದಿಕೆ ಅಸ್ತಿತ್ವಕ್ಕೆ ಬಂದಿದೆ. ವೇದಿಕೆಯ ಅಧ್ಯಕ್ಷರಾಗಿ ಬಿಂಬಕುಮಾರ್ ಕಾರ್ಯಾದ್ಯಕ್ಷರಾಗಿ ಟಿ.ಆರ್. ಸದಾಶಿವಯ್ಯ ಅವರನ್ನು ನೇಮಿಸಲಾಗಿದೆ ಎಂದು ಕವಿತಾಕೃಷ್ಣ ಸಾಹಿತ್ಯ ಮಂದಿರದ ಅಧ್ಯಕ್ಷ ಹಾಗೂ ಸಾಹಿತಿ ಕವಿತಾಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶೇಷ ಶಿಬಿರ
ತುಮಕೂರು: ಉಮಾಪ್ರಗತಿ ಕಾಲೇಜಿನ ವತಿಯಿಂದ ಮೈದಾಳ ಗ್ರಾಮದಲ್ಲಿ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಪ್ರಿನ್ಸಿಪಾಲ್ ಸೈಯದ್ ಅಕ್ರಂ ಆಲಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಿಬಿರಾಧಿಕಾರಿ ಶೇಖರ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪಾಂಡಿಯನ್, ನಟರಾಜು, ಮೋಸಸ್, ಮೈದಾಳ ಗ್ರಾಪಂ ಸದಸ್ಯ ಸತೀಶ್, ಅಯ್ಯನಪಾಳ್ಯ ಗ್ರಾಪಂ ಸದಸ್ಯ ಬಸಯ್ಯ ಮತ್ತಿತರರು ಉಪಸ್ಥಿತರಿದ್ದರು.
ಎನ್‌ಎಸ್‌ಎಸ್‌ಶಿಬಿರ
ತುಮಕೂರು: ತುಮಕೂರಿನ ಉಪ್ಪಾರಹಳ್ಳಿಯಲ್ಲಿರುವ ಸೇಕ್ರೆಡ್ ಹಾರ್ಟ್ ಪ್ರಥಮ ದರ್ಜೆ ಕಾಲೇಜು ವತಿಯಿಂದ ಮಲ್ಲಸಂದ್ರದಲ್ಲಿ ಎನ್‌ಎಸ್‌ಎಸ್ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರ ಮಾ.4 ರವರೆಗೆ ನಡೆಯಲಿದೆ. ಪ್ರತಿದಿನ ವಿಶೇಷ ಶಿಬಿರ ನಡೆಯಲಿದ್ದು, ಸಮಾರೋಪ ಸಮಾರಂಭ ಮಾ. 4 ರಂದು ಬೆಳಗ್ಗೆ 11 ಗಂಟೆಗೆ ಏರ್ಪಾಟಾಗಿದೆ.
ತೋಟದ ಮನೆಗೆ ಬೆಂಕಿ: ಅಪಾರ ನಷ್ಟ
ಕೆ.ಆರ್.ಪೇಟೆ:  ಪಟ್ಟಣದ ಜಯನಗರ ಬಡಾವಣೆಯ ಸರ್ಕಾರಿ ಐಟಿಐ ಕಾಲೇಜು ಸಮೀಪವಿರುವ ತೋಟದ ಮನೆಗೆ ಆಕಸ್ಮಿಕ ಬೆಂಕಿ ಬಿದ್ದು 2 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ತಾಲೂಕಿನ ಹೊಸಹೊಳಲು ಗ್ರಾಮದ ಈಶ್ವರ್ ಎಂಬುವವರಿಗೆ ಸೇರಿದ ತೋಟದ ಮನೆಯಲ್ಲಿ ಈ ಘಟನೆ ಸಂಭವಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments