ಜಯಚಂದ್ರ ರಾಜಿನಾಮೆಗೆ ಒತ್ತಾಯ
ತುಮಕೂರು: ವಾಟರ್ಗ್ರಿಡ್ ಕೆನಾಲ್ ಯೋಜನೆ ಕಾಲ್ಪನಿಕ, ಅವಾಸ್ತವ ಎಂದು ಹೇಳಿಕೆ ನೀಡಿರುವ ವಿಧಾನಸಭೆ ವಿರೋಧಪಕ್ಷ ಉಪನಾಯಕ ಟಿ.ಬಿ.ಜಯಚಂದ್ರ ವಿರುದ್ಧ ಕಲ್ಪತರು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಪ್ರೊ. ಸಿ.ಎಚ್. ಮರಿದೇವರು ಕಿಡಿಕಾರಿದ್ದಾರೆ.
ವಾಟರ್ ಗ್ರಿಡ್ ಯೋಜನೆ ಬಗ್ಗೆ ಲಘುವಾಗಿ ಮಾತನಾಡಿರುವ ಜಯಚಂದ್ರ ಕೂಡಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಈ ಕುರಿತು ಅವರು ಹೇಳಿಕೆ ನೀಡಿದ್ದು, ನೇತ್ರಾವತಿ ಕುಡಿಯುವ ನೀರಿನ ಯೋಜನೆ ಎಂಜಿನಿಯರ್ ಜಿ.ಎಸ್. ಪರಮಶಿವಯ್ಯ ಅವರ ಕೊಡುಗೆ. ಇದು 30 ವರ್ಷಗಳ ಹಿಂದಿನದು. ನಿರಂತರ ಹೋರಾಟದ ಫಲವಾಗಿ ಈ ಬಾರಿಯ ಬಜೆಟ್ನಲ್ಲಿ ಸೇರ್ಪಡೆಯಾಗಿ, ಹಣ ನಿಗದಿಗೊಳಿಸಲಾಗಿದೆ. ವಾಟರ್ಗ್ರಿಡ್ ಯೋಜನೆಯಿಂದ 9 ಜಿಲ್ಲೆಗಳ ಸುಮಾರು 9,000 ಕ್ಕೂ ಹೆಚ್ಚು ಕೆರೆಗಳಿಗೆ ಕುಡಿಯುವ ನೀರು ಲಭ್ಯವಾಗಲಿದೆ. ನಿರಂತರ ಹೋರಾಟದ ಫಲವಾಗಿ ಇದೀಗ ಪೂರಕ ಬಜೆಟ್ನಲ್ಲಿ ಹಣ ಮೀಸಲಿಡಲಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರ ಬೇಜವಾಬ್ದಾರಿತನಕ್ಕೆ ಜಯಚಂದ್ರ ಹೇಳಿಕೆ ಸಾಕ್ಷಿಯಾಗಿದೆ ಎಂದು ಮರಿದೇವರು ಲೇವಡಿ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.