ರಂಗೇರುತ್ತಿರುವ ಚುನಾವಣಾ ಕಾವು
ಪಾವಗಡ: ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ 23ವಾರ್ಡ್ಗಳಲ್ಲಿ ಚುನಾವಣೆ ಕಾವು ದಿನೇ ದಿನೇ ರಂಗೇರುತ್ತಿದ್ದು ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಹಣಾಹಣಿ ಏರ್ಪಟ್ಟಿದೆ.
ಈ ಎರಡು ಪಕ್ಷಗಳ ನಡುವೆ ಬಿಜೆಪಿ, ಬಿಎಸ್ಆರ್, ಕೆಜೆಪಿ ಹಾಗೂ ಇತರೆ ಸ್ವತಂತ್ರವಾಗಿ ಸ್ವರ್ಧಿಸಿದ ಅಭ್ಯರ್ಥಿಗಳು ತಮ್ಮ ಆಸ್ತಿತ್ವ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವುದು ಪಟ್ಟಣದ ಎಲ್ಲಾ ವಾರ್ಡ್ಗಳಲ್ಲಿ ಸಾಮಾನ್ಯವಾಗಿದೆ.
ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣಾದ್ಯಂತ ಈಗಾಗಲೇ ಪ್ರಚಾರದ ಅಬ್ಬರ ಕಾಣುತ್ತಿದ್ದು ವಿವಿಧ ಪಕ್ಷಗಳ ತಮ್ಮ ಬೆಂಬಲಿಗ ಮುಖಂಡರೊಂದಿಗೆ ಬೆಳಿಗ್ಗೆಯಿಂದ ರಾತ್ರಿ ಯವರೆವಿಗೆ ಮನೆಮನೆಗಳಿಗೆ ಸುತ್ತಾಡುತ್ತಾ ಮತದಾರರ ಮನವೊಲಿಸುವ ಬಿರಿಸಿನ ಯತ್ನ ಸಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.