ಹಿಟ್ಲರ್ ಎಂದ ಸೊಗಡುಗೆ ಶೀಘ್ರ ಪಾಠ
ತುಮಕೂರು: ತಮ್ಮನ್ನು ಹಿಟ್ಲರ್ಗೆ ಹೋಲಿಕೆಗೆ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣನವರಿಗೆ ತಕ್ಕ ಪಾಠ ಕಲಿಸುವ ದಿನಗಳು ದೂರವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾರ್ಮಿಕವಾಗಿ ನುಡಿದರು.
ಅವರು ಕೆಜೆಪಿ ರೋಡ್ ಶೋನಲ್ಲಿ ಮಾತನಾಡಿ, ಮುಂದಿನ ವಿಧಾನಸಭೆ ಚುನಾವಣೆ ವೇಳೆ ಹಿಟ್ಲರ್ ಅಂದರೆ ಏನು ಎಂಬುದನ್ನು ತೋರಿಸುವೆ ಎಂದು ಸೊಗಡುಗೆ ಸವಾಲು ಹಾಕಿದರು.
ಬಿಜೆಪಿ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಬಿಜೆಪಿ ಸರ್ಕಾರ ಲೂಟಿಯಲ್ಲಿ ತೊಡಗಿದೆ. ತುಮಕೂರು ವಿಧಾನಸಭಾ ಕ್ಷೇತ್ರಕ್ಕೆ ಕೆಜೆಪಿಯಿಂದ ಜ್ಯೋತಿಗಣೇಶ್ ಆರಿಸಿಬರಲಿದ್ದಾರೆ. ನಂತರ ತುಮಕೂರು ನಗರದ ಅಭಿವೃದ್ಧಿ ಖಚಿತ ಎಂದ ಯಡಿಯೂರಪ್ಪ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.