ತುಮಕೂರು

25 ಸಿಟಿ ಬಸ್ಗಳಿಗೆ ಸಿಸಿ ಕ್ಯಾಮೆರಾ

ತುಮಕೂರು: ತುಮಕೂರು ನಗರ ಸಾರಿಗೆಯ 25 ಬಸ್ಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.
ಈ ಹಿಂದೆ ಪ್ರಾಯೋಗಿಕವಾಗಿ 1 ಬಸ್ಸಿಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದು ಇದರ ಮುಂದುವರೆದ ಭಾಗವಾಗಿ 25 ಬಸ್ಗಳಿಗೆ ಅಳವಡಿಸಲಾಗಿದೆ.
ಮುಂದಿನ ದಿನಗಳಲ್ಲಿ ಎಲ್ಲಾ ನಗರ ಸಾರಿಗೆ ಬಸ್ಗಳಿಗೆ ಸಿಸಿ ಕ್ಯಾಮೆರಾ ಅಳವಡಿಸುವ ಇಂಗಿತವನ್ನು ಕೆಎಸ್ಆರ್ಟಿಸಿ ಡಿವಿಷನಲ್ ಕಂಟ್ರೋಲರ್ ಕೆ.ಆರ್. ವಿಶ್ವನಾಥ್ ವ್ಯಕ್ತಪಡಿಸಿದ್ದಾರೆ.
ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನಗರದಲ್ಲಿ ಸಂಚರಿಸುತ್ತಿರುವ ಹಾಲಿ 50 ಬಸ್ಗಳ ಜತೆ ಮತ್ತೆ 10 ಬಸ್ಗಳನ್ನು ಸೇರ್ಪಡೆ ಮಾಡುತ್ತಿರುವುದಾಗಿ ತಿಳಿಸಿದರು.
ಗುರುತಿಸಬೇಕಿದೆ: ಪ್ರಯಾಣಿಕರ ಸುರಕ್ಷತೆಗಾಗಿ ವಿಶೇಷವಾಗಿ ವೃದ್ಧರ, ಮಹಿಳೆಯರ, ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಸುರಕ್ಷಿತ ಸ್ಥಳಗಳಲ್ಲಿ ಬಸ್ ನಿಲ್ದಾಣ ಗುರುತಿಸಬೇಕಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈ ಯೋಜನೆಗಳ ಅಳವಡಿಕೆಗೆ ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ, ಹಾಗೂ ರಾಷ್ಟ್ರೀಯ ಹೆದ್ದಾರಿ ನಿಗಮಗಳ ಸಹಕಾರ ಅಗತ್ಯವಿದೆ. ಜಿಲ್ಲಾ ಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರು ವಿಶೇಷ ಗಮನಹರಿಸಿರುವುದರಿಂದ ಶೀಘ್ರದಲ್ಲಿಯೇ ಈ ಮೇಲಿನ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದು ವಿಶ್ವನಾಥ್
ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ನಾಗರೀಕರು ಹಾಗೂ ಸಂಘ-ಸಂಸ್ಥೆಗಳ ಸಹಕಾರದಿಂದ ನಗರಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ  ಕೆ.ಎಸ್.ಆರ್.ಟಿ.ಸಿ. ಪ್ರಯತ್ನಿಸುತ್ತದೆ ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಚೇಂಬರ್ ಅಧ್ಯಕ್ಷ ಸಾಗರನಹಳ್ಳಿ ಪ್ರಭು ವಹಿಸಿದ್ದರೆ, ಉಪಾಧ್ಯಕ್ಷ ಮೋಹನ್ ಕುಮಾರ್ ಪಟೇಲ್ ಸ್ವಾಗತಿಸಿದರು. ಚೇಂಬರ್ ಕಾರ್ಯದರ್ಶಿ ಅಬ್ದುಲ್ ಜಲೀಲ್ ವಂದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ