ಸಂಭ್ರಮದ ಈದ್ ಮಿಲಾದ್ ತುಮಕೂರಿನಲ್ಲಿ ಚಾಂದಿನಿ ಮೆರವಣಿಗೆ
ತುಮಕೂರು: ಈದ್ ಮಿಲಾದ್ ಹಬ್ಬದ ಅಂಗವಾಗಿ ನಗರದಲ್ಲಿ ಶುಕ್ರವಾರ ಗೂಡ್‌ಶೆಡ್ ಕಾಲೋನಿಯಿಂದ ಚಾಂದಿನಿ ಮೆರವಣಿಗೆ ಹೊರಟಿತು.
ಸಹಸ್ರಾರು ಮುಸ್ಲಿಂ ಬಾಂಧವರು ಭಾಗವಹಿಸಿದ್ದ ಮೆರವಣಿಗೆಯಲ್ಲಿ ನಗರಸಭಾ ಪ್ರಭಾರ ಅಧ್ಯಕ್ಷ ಅಸ್ಲಾಂಪಾಷ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬಾರ್‌ಲೈನ್ ರಸ್ತೆಯಲ್ಲಿರುವ ಮಸೀದಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ರಮಣ ಗುಪ್ತ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಷಫಿ ಅಹಮದ್, ಕಾಂಗ್ರೆಸ್ ಮುಖಂಡ ರಫೀಕ್ ಅಹಮದ್, ನಗರ ಡಿವೈಎಸ್ಪಿ ವಿಜಯಕುಮಾರ್ ಮುಂತಾದವರು ಇದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.