ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಗೋವಿಂದರಾಜು ವಿಶೇಷ ಆಹ್ವಾನಿತ

Parashurama
Updated On : 28 Jan 2013, 12:10 pm

ಶಿರಾ: ಪಟ್ಟಣದ ಎಸ್.ಎಲ್.ಗೋವಿಂದರಾಜು ಅವರನ್ನು ಅಖಿಲ ಕುಂಚಿಟಿಗರ ಮಹಾಮಂಡಲಕ್ಕೆ ವಿಶೇಷ ಆಹ್ವಾನಿತರನ್ನಾಗಿ ನೇಮಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮುರುಳೀಧರ ಹಾಲಪ್ಪ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಗಿಡ ನೆಡುವ ಕಾರ್ಯಕ್ರಮ
ತುಮಕೂರು: ನಗರದ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜು ವತಿಯಿಂದ ಎನ್‌ಸಿಸಿ ಆಶ್ರಯದಲ್ಲಿ ಕುಣಿಗಲ್ ತಾಲೂಕು ತೋಂಟದ ಸಿದ್ಧಲಿಂಗೇಶ್ವರ ಸ್ವಾಮಿಯ ತಪೋ ಕ್ಷೇತ್ರದ ಬಳಿ ಆಯುರ್ವೇದ ಗುಣವುಳ್ಳ ಸಂಜೀವಿನಿ ಔಷಧಿ ಸಸ್ಯಗಳು, ಹೂ ಮತ್ತು ನೆರಳಿನ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎನ್‌ಸಿಸಿ ವಿಭಾಗದ ಮುಖ್ಯಸ್ಥ ಕ್ಯಾಪ್ಟನ್ ಬಿ. ಶಿವಪ್ರಸಾದ್ ಔಷಧಿ ಸಸ್ಯಗಳ ಮಹತ್ವ, ಪರಿಸರ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮಿಲಿಟರಿ ಶೋಧ ಸುಬೇದಾರ್, ಮೇಜರ್ ಶುಕ್ಲ, ಹವಾಲ್ದಾರ್ ಗಣೇಶ್, ಹನುಮಂತಪ್ಪ, ಬಿ. ಶಿವಪ್ರಸಾದ್ ಮುಂತಾದವರು ಇದ್ದರು.
ರಾಜ್ಯ ಮಟ್ಟಕೆ ಆಯ್ಕೆ
ಹುಳಿಯಾರು: ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಪ್ರೌಢಶಾಲಾ ಶಿಕ್ಷಕರಿಗಾಗಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಸಹಪಠ್ಯ ಚಟುವಟಿಕೆಯ ಚಿತ್ರಕಲಾ ಸ್ಪರ್ಧೆಯಲ್ಲಿ ಹೋಬಳಿಯ ಬೋರನಕಣಿವೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯ ಶಿಕ್ಷಕರಾದ ಓಂಕಾರ್ ಅವರು ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಜಿಲ್ಲಾಮಟ್ಟದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸತತ ನಾಲ್ಕು ಬಾರಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  
ಮುಬಾರಕ್‌ಗೆ ಪ್ರಶಂಸೆ
ತುಮಕೂರು: ಸಮಾಜ ಸೇವಕ ಮುಬಾರಕ್ ಆಲಿ ಅವರಿಗೆ ಸಿದ್ಧಗಂಗಾ ಮಠಾಧ್ಯಕ್ಷ ಡಾ. ಶಿವಕುಮಾರ ಸ್ವಾಮೀಜಿ ಅವರು ಶುಭಾಶೀರ್ವಾದ ಪತ್ರ ನೀಡಿದ್ದಾರೆ. ಸಮಾಜ ಸೇವೆಯಲ್ಲಿ ಇನ್ನಷ್ಟು ಸೇವೆ ಸಲ್ಲಿಸಿ ಎಂದು ಶ್ರೀಗಳು ಆಶೀರ್ವದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments