ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ಬೇಕು

Rashmi Kasaragodu
Updated On : 29 Jan 2013, 11:42 am




ಮಧುಗಿರಿ: ವಿಕಲಚೇತನರ ಬಗ್ಗೆ ಅನುಕಂಪ ಬೇಡ. ಸಮಾಜದಲ್ಲಿ ಎಲ್ಲರಂತೆ ಪ್ರೀತಿ, ವಿಶ್ವಾಸದಿಂದ ಕಾಣಬೇಕು. ಬದುಕಿಗೆ ನೆರವಾಗುವಂಥ ಅವಕಾಶಗಳು ಬೇಕು ಎಂದು ಚಿತ್ರ ನಿರ್ಮಾಪಕ ಮುರುಳೀಧರ ಹಾಲಪ್ಪ ಕರೆ ನೀಡಿದರು.
ಇಲ್ಲಿನ ಮಾಲೀಮರಿಯಪ್ಪ ರಂಗಮಂದಿರದಲ್ಲಿ ತಾಲೂಕು ಅಂಗವಿಕಲರ ಕಲ್ಯಾಣ ವೇದಿಕೆ ವತಿಯಿಂದ ಏರ್ಪಡಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಅಂಗವಿಕಲರು ಕೀಳರಿಮೆ ಬಿಟ್ಟು ಸಮಾಜದ ಮುಖ್ಯವಾಹಿನಿಗೆ ಸೇರುವ ಮೂಲಕ ಸರ್ಕಾರದಿಂದ ದೊರೆಯುವ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಮುಂದೆ ಬರುವ ಜೊತೆಗೆ  ಮುಂಬರುವ ಚುನಾವಣೆಯಲ್ಲಿ ತಮ್ಮ ಕಷ್ಟ-ಸುಖಗಳಿಗೆ ಸ್ಪಂದಿಸುವ ಜನ ಪ್ರತಿನಿಧಿಗಳನ್ನು  ಆಯ್ಕೆ ಮಾಡುವ ನಿಟ್ಟಿನಲ್ಲಿ ನೈಜ ಮತದಾರರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಪ್ರೊ.ಮ.ಲ.ನ.ಮೂರ್ತಿ ವಿಕಲಚೇತನರಿಗೆ ಈಗಾಗಲೇ ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸಿದ್ದು, ಅದೇ ರೀತಿ ರಾಜಕೀಯ ಕ್ಷೇತ್ರದಲ್ಲಿ ಮೀಸಲಾತಿ ರೂಪಿಸಿ ವಿಧಾನ ಪರಿಷತ್, ರಾಜ್ಯಸಭೆಗೆ ವಿಕಲಚೇತನರನ್ನು ಸರ್ಕಾರ ನಾಮಕರಣ ಸದಸ್ಯರನ್ನಾಗಿ ಮಾಡಿದರೆ ಸದನದಲ್ಲಿ ಅಂಗವಿಕಲರ ಪ್ರತಿನಿಧಿಯಾಗಿ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ವೇದಿಕೆ ದೊರಕಿಸಿ ಕೊಟ್ಟಂತಾಗುತ್ತದೆ ಎಂದರು.
ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಕೆ.ಎಸ್.ಪಾಂಡುರಂಗಾರೆಡ್ಡಿ, ಎಪಿಎಂಸಿ ಅಧ್ಯಕ್ಷ ಎಂ.ಜಿ.ಶ್ರೀನಿವಾಸಮೂರ್ತಿ, ತುಮಕೂರು ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಬಿ. ನಾಗೇಶ್‌ಬಾಬು, ಮಾತನಾಡಿದರು. ಜಿಲ್ಲಾ ಅಂಗವಿಕಲರ ಕಲ್ಯಾಣ ವೇದಿಕೆ ಅಧ್ಯಕ್ಷ ಗಂಗರಾಜು ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮುಖ್ಯಾಧಿಕಾರಿ ಮಾರುತಿ ಶಂಕರ್, ತಾ.ಅಂಗವಿಕಲರ ಕಲ್ಯಾಣ ವೇದಿಕೆ ಅಧ್ಯಕ್ಷ ಮಹದೇವ್, ಮುಕುಂದಯ್ಯ,ಬಸವರಾಜು, ವೀರೇಶ್, ನಾಗರಾಜು, ಗ್ರೇಡ್ 2 ತಹಸೀಲ್ದಾರ್ ಚಂದ್ರಯ್ಯ, ಶಾಶ್ವತಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಸುವರ್ಣಮ್ಮ, ಕೆಜೆಪಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಬಿಎಸ್ ಆರ್ ಪಕ್ಷದ ಮೂಡ್ಲಗಿರೀಶ್, ಕಸಾಪ ಅಧ್ಯಕ್ಷ ಚಿ.ಸೂ.ಕೃಷ್ಣಮೂರ್ತಿ, ಲೇಖಕಿ ವಿಜಯ್ ಮೋಹನ್, ಸಿಡಿಪಿಓ ಸೋಮಸುಂದರ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮಧ್ಯ ಪ್ರದೇಶದಲ್ಲಿ ನಡೆದ ರಾಷ್ಟ್ರ ಮಟ್ಟದ ಅಂಗವಿಕಲರ ಕ್ರೀಡಾಕೂಟದಲ್ಲಿ ತುಮಕೂರು ಜಿಲ್ಲೆಯಿಂದ ಭಾಗವಹಿಸಿ ಬಂಗಾರದ ಪದಕ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿರುವ 11 ಜನ ವಿಕಲಚೇತನರಿಗೆ ಹಾಗೂ ವಿಶ್ವ ವಿಖ್ಯಾತ ಮಧುಗಿರಿಯ ಏಕಶಿಲಾ ಬೆಟ್ಟ ಹತ್ತಿದ ವಿಕಲಚೇತನರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement