ಸಿಎಸ್ ಪುರ ಬ್ಲಾಕ್ಗೆ ಸುಬ್ರಹ್ಮಣ್ಯ ನೇಮಕ
ತುರುವೇಕೆರೆ: ತುರುವೇಕೆರೆ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಸಿಎಸ್ ಪುರ ಬ್ಲಾಕ್ ಕಾಂಗ್ರೆಸ್ನ ಪರಿಶಿಷ್ಟ ಜಾತಿ ಅಧ್ಯಕ್ಷರನ್ನಾಗಿ ಮಾಯಸಂದ್ರದ ಎಂ.ಎನ್. ಸುಬ್ರಹ್ಮಣ್ಯ ಅವರನ್ನು ನೇಮಕ ಮಾಡಿರುವುದಾಗಿ ಜಿಲ್ಲಾ ಕಾಂಗ್ರೆಸ್ನ ಎಸ್ಸಿ ವಿಭಾಗದ ಅಧ್ಯಕ್ಷ ಆರ್. ರಾಮಕೃಷ್ಣ ಆದೇಶಿಸಿದ್ದಾರೆ. ಮಾಯಸಂದ್ರ ಗ್ರಾಮ ಪಂಚಾಯ್ತಿಯ ಸದಸ್ಯರಾಗಿರುವ ಸುಬ್ರಹ್ಮಣ್ಯ ಅವರ ಸೇವೆಯನ್ನು ಪರಿಗಣಿಸಿರುವ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಧ್ಯಕ್ಷ ಎನ್.ಮಂಜುನಾಥ್ ಸಿ ಎಸ್ ಪುರ ಬ್ಲಾಕ್ನ ಅಧ್ಯಕ್ಷತೆಯನ್ನು ನೀಡಿದ್ದಾರೆ. ತಮ್ಮ ಸೇವೆಯನ್ನು ಪರಿಗಣಿಸಿ ಅವಕಾಶ ನೀಡಿರುವ ಕ್ರಮವನ್ನು ಸುಬ್ರಹ್ಮಣ್ಯ ಸ್ವಾಗತಿಸಿ ಪ್ರಾಮಾಣಿಕವಾಗಿ ಸೇವೆ ಮಾಡುವ ಭರವಸೆ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.